ಮಂಗಳೂರು: ಕುಕ್ಕರ್​ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಮಾ.15ರವರೆಗೆ NIA ಕಸ್ಟಡಿಗೆ

Prasthutha|

ಮಂಗಳೂರು: ಕುಕ್ಕರ್​ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಶಾರಿಕ್‌ನನ್ನು ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಮಾರ್ಚ್‌15 ರವರೆಗೆ ಎನ್‌ಐಎ ಅಧಿಕಾರಿಗಳ ಕಸ್ಟಡಿಗೆ ನೀಡಿ ಆದೇಶಿಸಿದೆ.

- Advertisement -

ಸುಟ್ಟು ಗಾಯಗೊಂಡಿದ್ದ ಶಾರಿಕ್ ಇದೀಗ ಚೇತರಿಸಿಕೊಂಡಿದ್ದು ಆತನನ್ನು ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

ಎನ್‌ಐಎ ಅಧಿಕಾರಿಗಳು ಕಸ್ಟಡಿಗೆ ಪಡೆದು ಶಾರಿಕ್​ನ ವಿಚಾರಣೆ ಮಾಡಲಿದ್ದಾರೆ. ಕುಕ್ಕರ್​ ಬಾಂಬ್ ಸ್ಫೋಟ ವೇಳೆ ಗಂಭೀರ ಗಾಯಗೊಂಡಿದ್ದ ಶಾರಿಕ್​ನನ್ನು ಮಂಗಳೂರಿನ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ 2022ರ ಡಿಸೆಂಬರ್​ 17ರಂದು ​ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

- Advertisement -

ಆರೋಪಿಗೆ ಎನ್​ಐಎ ಹಾಗೂ ಸ್ಥಳೀಯ ಪೊಲೀಸರ ಭದ್ರತೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.

Join Whatsapp