ಬೆಳ್ಳಂಬೆಳಿಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ NIA ದಾಳಿ

Prasthutha|

- Advertisement -

ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ಪುತ್ತೂರು ಸೇರಿ 16 ಕಡೆ ಹಲವರ ಮನೆ, ಕಚೇರಿಗಳು, ಆಸ್ಪತ್ರೆ ಮೇಲೆ ದಾಳಿ

ಮಂಗಳೂರು: ಬೆಳ್ಳಂಬೆಳಿಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ದಾಳಿ ಮಾಡಿದ್ದಾರೆ.

- Advertisement -

ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿದಂತೆ 16 ಕಡೆ ಹಲವರ ಮನೆ, ಕಚೇರಿಗಳು, ಆಸ್ಪತ್ರೆ ಮೇಲೆ ದಾಳಿಮಾಡಿ ಪರಿಶೀಲನೆ ನಡೆಸಲಾಗಿದೆ.

ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದರು ಎಂಬ ಆರೋಪದ ಮೇಲೆ NIA ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಈ ಹಿನ್ನೆಲೆ ಇಂದು (ಮೇ.31) NIA ಅಧಿಕಾರಿಗಳು ಮತ್ತೆ ದಕ್ಷಿಣ ಕನ್ನಡದ ಹಲವು ಕಡೆ ದಾಳಿ ಮಾಡಿದ್ದು, ಮನೆ, ಕಚೇರಿ, ಒಂದು ಆಸ್ಪತ್ರೆಯಲ್ಲಿ ಪರಿಶೀಲನೆ ನಡೆಸಿದ್ದಾರೆ.

ಈ ಹಿಂದೆ ಬಂಟ್ವಾಳ ಮತ್ತು ಪುತ್ತೂರಿನಲ್ಲಿ ದಾಳಿ ನಡೆಸಿದ್ದ NIA ಅಧಿಕಾರಿಗಳು


ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಮಾರ್ಚ್​ ತಿಂಗಳಲ್ಲಿ ಬಂಟ್ವಾಳ ತಾಲೂಕಿನ ನಂದಾವರದಲ್ಲಿ ದಾಳಿ ನಡೆಸಿದ್ದರು. ವಿಧ್ವಂಸಕ ಕೃತ್ಯ ಎಸಗಲು ಹಣಕಾಸಿನ ನೆರವು ಒದಗಿಸಿರಬಹುದು ಎಂಬ ಗುಮಾನಿಯ ಮೇರೆಗೆ ಬಂಟ್ವಾಳ ಮೂಲದ ಮಹಮ್ಮದ್ ಸಿನಾನ್, ಸಜಿಪ ಮೂಡದ ಸರ್ಫ್ರಾಜ್ ನವಾಜ್, ಇಕ್ಬಾಲ್, ಪುತ್ತೂರಿನ ಅಬ್ದುಲ್ ರಫೀಕ್ ಎಂಬ ನಾಲ್ವರ ಮನೆ ಮೇಲೆ ದಾಳಿ ಮಾಡಿ ಬಂಧಿಸಿದ್ದರು.

ಪ್ರಧಾನಿ ಮೋದಿ ಕಾರ್ಯಕ್ರಮವನ್ನು ವಿಫಲಗೊಳಿಸಲು ಸಂಚು ನಡೆಸಿರುವವರ ಜೊತೆ ಈ ನಾಲ್ವರು ಸಂಪರ್ಕ ಹೊಂದಿದ್ದು, ಹಣಕಾಸು ನೆರವು ಒದಗಿಸಿದ್ದಾರೆ ಎಂಬ ಆರೋಪದಡಿ ದಾಳಿ ನಡೆದಿತ್ತು. ಕೃತ್ಯಕ್ಕೆ ಸಂಬಂಧಿಸಿದಂತೆ ವಿವಿಧ ಖಾತೆಗಳಿಗೆ ಕೋಟ್ಯಂತರ ರೂಪಾಯಿ ಹಣ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪವೂ ಸಹ ಇವರ ಮೇಲಿದೆ ಎಂದು ಹೇಳಲಾಗಿತ್ತು.

ಇನ್ನು ದಾಳಿ ವೇಳೆ ನಂದಾವರಕ್ಕೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ನಂದಾವರದ ವ್ಯಕ್ತಿಯೊಬ್ಬರು ಹಣಕಾಸಿನ ನೆರವು ನೀಡಿದ ಮೂಲ ಹಾಗೂ ವಿವರಗಳನ್ನು ಪಡೆದುಕೊಳ್ಳಲು ದಾಳಿ ನಡೆದಿತ್ತು. ಮೂವರ ವಿಚಾರಣೆ ನಡೆಸಲಾಗಿತ್ತು. ಇವರಲ್ಲಿ ಒಬ್ಬರು ದುಬೈನಿಂದ ಕಳೆದ ವರ್ಷ ಊರಿಗೆ ಮರಳಿದ್ದರು. ಉಳಿದವರು ಮೆಲ್ಕಾರ್​ನಲ್ಲಿ ಪಾಸ್ ಪೋರ್ಟ್ ವ್ಯವಹಾರ ಮಾಡಿಕೊಂಡಿದ್ದರು.



Join Whatsapp