ಜೈಪುರ: ಕರ್ಣಿ ಸೇನಾ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹರ್ಯಾಣ ಮತ್ತು ರಾಜಸ್ಥಾನದ 31 ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ದಾಳಿ ನಡೆಸುತ್ತಿದೆ.
ಗೃಹ ಸಚಿವಾಲಯ (ಎಂಎಚ್ಎ) ಇತ್ತೀಚೆಗೆ ಹತ್ಯೆಯ ತನಿಖೆಯನ್ನು ಎನ್ಐಎಗೆ ಹಸ್ತಾಂತರಿಸಿತ್ತು .
ಪ್ರಕರಣವನ್ನು ಕೈಗೆತ್ತಿಕೊಂಡ ನಂತರ ಎನ್ಐಎ ಶಂಕಿತರನ್ನು ವಿಚಾರಣೆಗೆ ಒಳಪಡಿಸಿತ್ತು. ವಿಚಾರಣೆ ವೇಳೆ ಸಿಕ್ಕ ಮಾಹಿತಿ ಮೇರೆಗೆ ದಾಳಿ ನಡೆಸಲಾಗುತ್ತಿದೆ. ರಾಷ್ಟ್ರೀಯ ರಜಪೂತ ಕರ್ಣಿ ಸೇನೆಯ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಅವರನ್ನು ಡಿಸೆಂಬರ್ 5 ರಂದು ಜೈಪುರದ ಅವರ ಮನೆಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು .