ನವದೆಹಲಿ: ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಪ್ರೊಫೆಸರ್ ಆನಂದ್ ತೇಲ್ತುಂಬ್ಡೆ ಅವರಿಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್ ಆದೇಶದ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.
ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರ ಮುಂದೆ ಗುರುವಾರ ತುರ್ತು ಪಟ್ಟಿಗಾಗಿ ಈ ವಿಷಯವನ್ನು ಪ್ರಸ್ತಾಪಿಸಿದರು. ಹೈಕೋರ್ಟ್ ತೇಲ್ತುಂಬ್ಡೆಗೆ ನವೆಂಬರ್ 18 ರಂದು ನೀಡಿದ ಜಾಮೀನು ಆದೇಶವನ್ನು ಒಂದು ವಾರದವರೆಗೆ ತಡೆಹಿಡಿದಿದೆ.
ಶುಕ್ರವಾರ ಈ ವಿಷಯವನ್ನು ಪಟ್ಟಿ ಮಾಡಲು ಒಪ್ಪಿರುವ ಸಿಜೆಐ, ಅರ್ಜಿಯ ಪ್ರತಿಯನ್ನು ತೇಲ್ತುಂಬ್ಡೆ ಪರ ವಾದಿಸುತ್ತಿರುವ ವಕೀಲೆ ಅಪರ್ಣಾ ಭಟ್ ಅವರಿಗೆ ಕೇವಿಯಟ್’ನಲ್ಲಿ ನೀಡುವಂತೆ ಸಾಲಿಸಿಟರ್ ಜನರಲ್ ಅವರಿಗೆ ಸೂಚಿಸಿದರು.
ಭೀಮಾ ಕೋರೆಗಾಂವ್-ಎಲ್ಗರ್ ಪರಿಷದ್ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾದ ಐಐಟಿಯ ಮಾಜಿ ಪ್ರಾಧ್ಯಾಪಕ ಮತ್ತು ದಲಿತ ವಿದ್ವಾಂಸ ಪ್ರೊ.ಆನಂದ್ ತೇಲ್ತುಂಬ್ಡೆ ಅವರಿಗೆ ಬಾಂಬೆ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿತ್ತು.