ಮಂಗಳೂರು : ಎರಡು ದಿನಗಳ ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಂಗಳೂರಿನಲ್ಲಿ ಎನ್ಐಎ ಕಚೇರಿ ಆರಂಭಿಸುವ ಕುರಿತು ಸುಳಿವು ನೀಡಿದ್ದಾರೆ.
ಶುಕ್ರವಾರ ನಗರದ ಸರ್ಕಿಟ್ ಹೌಸ್ ನಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, “ರಾಜ್ಯದಲ್ಲಿ ಈಗಾಗಲೇ ಒಬ್ಬ ದಕ್ಷತೆಯ ನಾಯಕನನ್ನು ಗೃಹ ಸಚಿವರನ್ನಾಗಿ ಮಾಡಲಾಗಿದೆ. ಅವರು ಈಗಾಗಲೇ ಎರಡು ಬಾರಿ ಪೊಲೀಸ್ ಅಧಿಕಾರಿಗಳ ಸಭೆ ಮಾಡಿದ್ದು, ಮುಂದೆಯೂ ಕೆಲ ಸಭೆ ನಡೆಯಲಿದೆ. ಮುಂಬರುವ ದಿನಗಳಲ್ಲಿ ಗೃಹ ಸಚಿವರು ಕರಾವಳಿಗೆ ಭೇಟಿ ಕೊಟ್ಟು ಪರಿಶೀಲಿಸಲಿದ್ದಾರೆ. ಆ ಬಳಿಕ ನಾವೆಲ್ಲರೂ ಒಟ್ಟಾಗಿ ಚರ್ಚಿಸಿ ಎನ್ಐಎ ಕಚೇರಿ ಸ್ಥಾಪನೆ ಬಗ್ಗೆ ನಿರ್ಧಾರ ತೆಗೆದುಕೊಳ್ತೇವೆ” ಎಂದು ಹೇಳಿದ್ದಾರೆ.
” ಈ ಬಗ್ಗೆ ಕೆಲವು ವಿಚಾರಗಳನ್ನು ನಾವು ಬಹಿರಂಗ ಪಡಿಸಲು ಆಗುವುದಿಲ್ಲ. ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದೇವೆ ” ಎಂದು ಹೇಳುವ ಮೂಲಕ ಎನ್ಐಎ ಕಚೇರಿ ಆರಂಭಿಸುವ ಬಗ್ಗೆ ಸುಳಿವು ನೀಡಿದ್ದಾರೆ.