ಸುಳ್ಯ: ಸುಳ್ಯದಲ್ಲಿ ಮೂವರು ಎಸ್ ಡಿ ಪಿ ಐ ಮುಖಂಡರನ್ನು NIA ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಎಸ್ ಡಿ ಪಿ ಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಮತ್ತು ಬೆಳ್ಳಾರೆ ಗ್ರಾ. ಪಂಚಾಯಿತಿ ಸದಸ್ಯ ಇಕ್ಬಾಲ್ ಬೆಳ್ಳಾರೆ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ ಮತ್ತು ಸುಳ್ಯದ ಇಬ್ರಾಹಿಂ ಶಾ ಅವರನ್ನು ಎನ್ ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಮೈಸೂರು, ಹುಬ್ಬಳ್ಳಿ, ಸುಳ್ಯ ಹೀಗೆ ರಾಜ್ಯದ ಹಲವೆಡೆ ಇಂದು ಬೆಳಗ್ಗೆ ಮತ್ತೆ NIA ತಲಾಶ್ ನಡೆಸಿದ್ದು, ಪರಿಶೋಧನೆ ನಡೆಸುತ್ತಿದ್ದಾರೆ. ಯಾವ ಪ್ರಕರಣಕ್ಕೆ ಸಂಬಂಧಿಸಿ ಈ ದಾಳಿ ನಡೆದಿದೆ ಎಂಬುದು ಸ್ಪಷ್ಟವಾಗಿಲ್ಲ.