ಮಂಗಳೂರು: ಉಳ್ಳಾಲದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಪುತ್ರ ಬಿ.ಎಂ. ಬಾಷಾ ಅವರ ಮನೆಗೆ ಸೋಮವಾರ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿ ಬಾಷಾ ಅವರ ಸೊಸೆ ಮರಿಯಂ ಅವರನ್ನು ವಶಕ್ಕೆ ಪಡೆದಿದ್ದಾರೆ.
ಉಳ್ಳಾಲದ ಮಾಸ್ತಿಕಟ್ಟೆಯಲ್ಲಿರುವ ಬಿ.ಎಂ. ಬಾಷಾ ಅವರ ಮನೆಗೆ ಕಳೆದ ಆಗಸ್ಟ್ ತಿಂಗಳ ಮೊದಲ ವಾರದಲ್ಲಿ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದರು. ಎರಡು ದಿನಗಳ ಕಾಲ ವಿಚಾರಣೆ ನಡೆಸಿದ ಬಳಿಕ, ಬಾಷಾ ಅವರ ಕಿರಿಯ ಪುತ್ರ ಅಬ್ದುಲ್ ರೆಹಮಾನ್ ಎಂಬಾತನನ್ನು ಅಧಿಕಾರಿಗಳು ಬಂಧಿಸಿ ಕರೆದೊಯ್ದಿದ್ದರು.
ಈ ವೇಳೆ ಮರಿಯಂ ಅವರನ್ನೂ ಸುದೀರ್ಘ ವಿಚಾರಣೆ ನಡೆಸಿ ಸಂಜೆ ಮರಿಯಂ ಅವರನ್ನು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ.