ಮಂಗಳೂರಿನಲ್ಲಿ NIA ದಾಳಿ: ನಾಲ್ವರು PFI ಮುಖಂಡರು ವಶಕ್ಕೆ

Prasthutha|

ಸುರತ್ಕಲ್: ಗುರುವಾರ ಬೆಳ್ಳಂಬೆಳಗ್ಗೆ ಎನ್ ಐಎ ಅಧಿಕಾರಿಗಳು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಜಿಲ್ಲಾ ಕಚೇರಿ ಸೇರಿದಂತೆ ಪಿಎಫ್ಐ ನಾಯಕರ ಮನೆ ಮೇಲೆ ದಾಳಿ ನಡೆಸಿದ್ದು, ನಾಲ್ಕು ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಎನ್ ಐಎ ಮನೆಮಂದಿಯ ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆದಿದೆ ಎಂದು ತಿಳಿದುಬಂದಿದೆ.
ಮಂಗಳೂರಿನ ಕಂಕನಾಡಿ, ಹಳೆಯಂಗಡಿ, ಜೋಕಟ್ಟೆ, ಕಾವೂರಿನಲ್ಲಿರುವ ಪಿಎಫ್ಐ ನಾಯಕರ ಮನೆಗಳ ಮೇಲೆ ದಾಳಿ ನಡೆಸಿ ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement -