ಹಾನಗಲ್ ಜೆಡಿಎಸ್ ಅಭ್ಯರ್ಥಿಯಾಗಿ ನಿಯಾಝ್ ಶೇಕ್ ಅಧಿಕೃತ ಘೋಷಣೆ: ಬಿ ಫಾರಂ ನೀಡಿದ ಎಚ್ ಡಿಕೆ

Prasthutha|

ರಾಮನಗರ: ಹಾನಗಲ್ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್ ಅಭ್ಯರ್ಥಿಯಾಗಿ ನಿಯಾಝ್ ಶೇಕ್ ಅವರನ್ನು ಅಧಿಕೃತವಾಗಿ ಘೋಷಣೆ ಮಾಡಲಾಯಿತು.

- Advertisement -


ನಿಯಾಝ್ ಶೇಕ್ ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ಬೀ ಫಾರಂ ನೀಡಿದ್ದಾರೆ.
ಸಿಂಧಗಿ ಹಾಗೂ ಹಾನಗಲ್ ನಲ್ಲಿ ಶಾಸಕರು ಅಕಾಲಿಕ ಮರಣ ಹೊಂದಿದ್ದರಿಂದ, ಅಕ್ಟೋಬರ್ 30ರಂದು ಈ ಎರಡೂ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ನವೆಂಬರ್ 2ರಂದು ಮತ ಎಣಿಕೆ ನಡೆಯಲಿದೆ.


ಕಾಂಗ್ರೆಸ್ ಮತ್ತು ಬಿಜೆಪಿ ಈ ಕ್ಷೇತ್ರಗಳಿಗೆ ಇನ್ನೂ ಅಭ್ಯರ್ಥಿಗಳನ್ನು ಅಂತಿಮಗೊಳಿಸಿಲ್ಲ.

Join Whatsapp