Home ಟಾಪ್ ಸುದ್ದಿಗಳು ಹಾನಗಲ್ ಜೆಡಿಎಸ್ ಅಭ್ಯರ್ಥಿಯಾಗಿ ನಿಯಾಝ್ ಶೇಕ್ ಅಧಿಕೃತ ಘೋಷಣೆ: ಬಿ ಫಾರಂ ನೀಡಿದ ಎಚ್ ಡಿಕೆ

ಹಾನಗಲ್ ಜೆಡಿಎಸ್ ಅಭ್ಯರ್ಥಿಯಾಗಿ ನಿಯಾಝ್ ಶೇಕ್ ಅಧಿಕೃತ ಘೋಷಣೆ: ಬಿ ಫಾರಂ ನೀಡಿದ ಎಚ್ ಡಿಕೆ

ರಾಮನಗರ: ಹಾನಗಲ್ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್ ಅಭ್ಯರ್ಥಿಯಾಗಿ ನಿಯಾಝ್ ಶೇಕ್ ಅವರನ್ನು ಅಧಿಕೃತವಾಗಿ ಘೋಷಣೆ ಮಾಡಲಾಯಿತು.


ನಿಯಾಝ್ ಶೇಕ್ ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ಬೀ ಫಾರಂ ನೀಡಿದ್ದಾರೆ.
ಸಿಂಧಗಿ ಹಾಗೂ ಹಾನಗಲ್ ನಲ್ಲಿ ಶಾಸಕರು ಅಕಾಲಿಕ ಮರಣ ಹೊಂದಿದ್ದರಿಂದ, ಅಕ್ಟೋಬರ್ 30ರಂದು ಈ ಎರಡೂ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ನವೆಂಬರ್ 2ರಂದು ಮತ ಎಣಿಕೆ ನಡೆಯಲಿದೆ.


ಕಾಂಗ್ರೆಸ್ ಮತ್ತು ಬಿಜೆಪಿ ಈ ಕ್ಷೇತ್ರಗಳಿಗೆ ಇನ್ನೂ ಅಭ್ಯರ್ಥಿಗಳನ್ನು ಅಂತಿಮಗೊಳಿಸಿಲ್ಲ.

Join Whatsapp
Exit mobile version