ಕೋಯಿಕ್ಕೋಡ್: ನಿಫಾ ವೈರಸ್ ನಿಂದ ಬಾಲಕ ಮೃತಪಟ್ಟ ಬೆನ್ನಲ್ಲೇ ಇಬ್ಬರು ಆರೋಗ್ಯ ಕಾರ್ಯಕರ್ತರಲ್ಲಿ ಸೋಂಕಿನ ಲಕ್ಷಣ ಕಂಡು ಬಂದಿವೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.
ಬೆಳಗ್ಗೆ ನಿಫಾ ವೈರಸ್ ನಿಂದ ಮೃತಪಟ್ಟ ಬಾಲಕನ ಜೊತೆ 12 ದಿನಗಳಿಂದ ಸಂಪರ್ಕಕ್ಕೆ ಬಂದಿದ್ದ 188 ಮಂದಿಯನ್ನು ನಾವು ಗುರುತಿಸಿದ್ದೇವೆ. ಅದರಲ್ಲಿ 20 ಜನರು ಹೆಚ್ಚಿನ ಅಪಾಯದ ಸಂಪರ್ಕಗಳಾಗಿದ್ದು, ಇವರಲ್ಲಿ ಇಬ್ಬರಿಗೆ ರೋಗಲಕ್ಷಣಗಳು ಕಂಡುಬಂದಿದೆ.
ಇಬ್ಬರೂ ಆರೋಗ್ಯ ಕಾರ್ಯಕರ್ತರಾಗಿದ್ದಾರೆ. ಒಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಾರೆ, ಮತ್ತೊಬ್ಬರು ಕೋಯಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಸಿಬ್ಬಂದಿಯಾಗಿದ್ದಾರೆ ಎಂದು ಸಚಿವೆ ಮಾಹಿತಿ ನೀಡಿದ್ದಾರೆ.