Home ಟಾಪ್ ಸುದ್ದಿಗಳು ಕೇರಳದಲ್ಲಿ ಮತ್ತೆ ಕಾಣಿಸಿಕೊಂಡ ನಿಫಾ ವೈರಸ್: 12 ವರ್ಷದ ಬಾಲಕ ಬಲಿ

ಕೇರಳದಲ್ಲಿ ಮತ್ತೆ ಕಾಣಿಸಿಕೊಂಡ ನಿಫಾ ವೈರಸ್: 12 ವರ್ಷದ ಬಾಲಕ ಬಲಿ

ತಿರುವನಂತಪುರಂ: 12 ವರ್ಷದ ಬಾಲಕ ನಿಫಾ ವೈರಸ್ ನಿಂದ ಸಾವನ್ನಪ್ಪಿದ್ದಾನೆಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.

ಕೇರಳದ ಕೋಯಿಕ್ಕೋಡ್ ಜಿಲ್ಲಾಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಶನಿವಾರ ರಾತ್ರಿ ಬಾಲಕನ ಸ್ಥಿತಿ ಗಂಭೀರವಾಗಿತ್ತು. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತಾದರೂ ಬಾಲಕ ಬದುಕುಳಿದಿಲ್ಲ.

ಬಾಲಕನಿಂದ ಸಂಗ್ರಹಿಸಿದ್ದ ಕೆಲವು ಮಾದರಿಗಳನ್ನ ಪುಣೆಯ ನ್ಯಾಷನಲ್ ಇನ್ಸ್ಟಿಟ್ಯೂಟ್‌ ಆಫ್ ವೈರಾಲಾಜಿಗೆ ಕಳುಹಿಸಲಾಗಿತ್ತು. ಅದರಲ್ಲಿ ಬಾಲಕನಿಗೆ ನಿಫಾ ವೈರಸ್ ಇರೋದು ದೃಢವಾಗಿದೆ.

ಇದೀಗ ಬಾಲಕನ ಜೊತೆ ಸಂಪರ್ಕದಲ್ಲಿದ್ದವರನ್ನು ಹುಡುಕುವುದೇ ಸಾಹಸವಾಗಿದೆ. ಅದಕ್ಕಾಗಿ ವಿವಿಧ ತಂಡಗಳನ್ನು ರಚಿಸಲಾಗಿದ್ದು, ಅಲ್ಲದೆ ಬಾಲಕನ ಸಂಪರ್ಕದಲ್ಲಿದ್ದವರಿಗೆ ಕ್ವಾರಂಟೈನ್ ಮಾಡಲು ಈಗಾಗಲೇ ಎಲ್ಲಾ ಸಿದ್ಧತೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

Join Whatsapp
Exit mobile version