ಬೆಂಗಳೂರು: ರಾಜ್ಯಾದ್ಯಂತ ಜನವರಿ 31ರಿಂದ ನೈಟ್ ಕರ್ಫ್ಯೂ ಇರುವುದಿಲ್ಲ. ಜೊತೆಗೆ ಸೋಮವಾರದಿಂದ ಬೆಂಗಳೂರಿನಲ್ಲಿ ಶಾಲೆಗಳು ಪುನಾರಂಭಗೊಳ್ಳಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಅವರು, ದೇವಾಲಯ, ಮಸೀದಿ, ಚರ್ಚ್ ಗಳಲ್ಲಿ ಎಲ್ಲ ಧಾರ್ಮಿಕ ಸೇವೆಗಳಿಗೆ ಅವಕಾಶ ಇರುತ್ತದೆ. ಆದರೆ ಏಕಕಾಲದಲ್ಲಿ 50 ಜನರಷ್ಟೇ ಸೇರಲು ಅವಕಾಶವಿರುತ್ತದೆ. ಚಿತ್ರಮಂದಿರಗಳಲ್ಲಿ ಶೇ.50ರ ನಿಯಮ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಆದರೆ ಜಾತ್ರೆಗಳು, ಧರಣಿ, ಪ್ರತಿಭಟನೆಗಳಿಗೆ ನಿರ್ಬಂಧ ಮುಂದುವರಿಯಲಿದೆ. ಕಚೇರಿಗಳಲ್ಲಿ 100 ಶೇ. ಸಿಬ್ಬಂದಿಯೊಂದಿಗೆ ಕಾರ್ಯಾಚರಿಸಲು ಅವಕಾಶ ಇರುತ್ತದೆ. ಸ್ವಿಮ್ಮಿಂಗ್ ಫುಲ್, ಜಿಮ್ ಗಳಲ್ಲಿ ಶೇ.50ರಷ್ಟು ಅವಕಾಶ ನೀಡಲಾಗಿದೆ. ಹೋಟೆಲ್, ಪಬ್, ರೆಸ್ಟೋರೆಂಟ್ ಗಳು ತೆರೆಯಲು ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.