ಮಂಗಳೂರು: ರಾಜ್ಯದಲ್ಲಿ ಓಮಿಕ್ರಾನ್ ಹಿನ್ನೆಲೆ ನೈಟ್ ಕರ್ಫ್ಯೂ ಜಾರಿ ಮಾಡಿದ್ದು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಕರ್ಫ್ಯೂವನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸಲಾಗಿದೆ.
ಪೊಲೀಸರು ಮಂಗಳವಾರ ಸಂಜೆಯಿಂದಲೇ ವಿವಿದೆಡೆ ಬ್ಯಾರಿಕೇಡ್ ಗಳನ್ನು ಅಳವಡಿಸಿ ಸರಕಾರದ ಸೂಚನೆಯಂತೆ ರಾತ್ರಿ 10ರ ಅನಂತರ ತೀರಾ ಅಗತ್ಯದ ಉದ್ದೇಶಗಳಿಗೆ ಮಾತ್ರ ವಾಹನಗಳ ಓಡಾಟಕ್ಕೆ ಅವಕಾಶ ನೀಡಿದ್ದಾರೆ.
ದ.ಕ. ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಈಗಾಗಲೇ ಲಾಕ್ ಡೌನ್ ಸಂದರ್ಭ ಸುಮಾರು 15 ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದ್ದು, ಅಲ್ಲಿ ವಿಶೇಷ ನಿಗಾ ವಹಿಸಲಾಗುವುದು. ಒಂದು ವೇಳೆ ಅಂಗಡಿಮುಂಗಟ್ಟುಗಳನ್ನು ತೆರೆದಿದ್ದರೆ ಎಚ್ಚರಿಕೆ ನೀಡಲಾಗುವುದು. ಆದೇಶ ಉಲ್ಲಂಘಿಸಿ ಓಡಾಟ ಕಂಡು ಬಂದರೆ ಪ್ರಕರಣ ದಾಖಲಿಸಲಾಗುವುದು ಎಂದು ಎಸ್ ಪಿ ಹೃಷಿಕೇಶ್ ಸೋನಾವಣೆ ಹೇಳಿದ್ದಾರೆ.