Home ಟಾಪ್ ಸುದ್ದಿಗಳು ಪಂಜಾಬ್ ನಲ್ಲಿ ನೈಟ್ ಕರ್ಫ್ಯೂ ಜಾರಿ: ಶಾಲಾ ಕಾಲೇಜು ಬಂದ್

ಪಂಜಾಬ್ ನಲ್ಲಿ ನೈಟ್ ಕರ್ಫ್ಯೂ ಜಾರಿ: ಶಾಲಾ ಕಾಲೇಜು ಬಂದ್

ಚಂಡೀಗಡ: ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪಂಜಾಬ್ ನಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ.

ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ.

ಶಾಲಾ ಕಾಲೇಜುಗಳನ್ನು ಬಂದ್ ಮಾಡಲು ಸೂಚಿಸಲಾಗಿದ್ದು, ರಾತ್ರಿ 10 ಗಂಟೆಯಿಂದ ಕರ್ಫ್ಯೂ ವಿಧಿಸಲಾಗಿದೆ ಎಂದು ಪಂಜಾಬ್ ಸರ್ಕಾರ ತಿಳಿಸಿದೆ.

ಮುಖ್ಯಮಂತ್ರಿ ಚರಂಜೀತ್ ಸಿಂಗ್ ಚನ್ನಿ ಅವರ ನೇತೃತ್ವದಲ್ಲಿ ರಾಜ್ಯದ ಕೋವಿಡ್ ಪರಿಸ್ಥಿತಿ ಕುರಿತ ಪರಿಶೀಲನಾ ಸಭೆ ನಡೆಯಿತು. ಸಭೆಯ ಬಳಿಕ ಈ ಹೊಸ ನಿರ್ಬಂಧಗಳನ್ನು ಘೋಷಿಸಲಾಯಿತು.

ಇಂದು ಹೊರಡಿಸಲಾದ ಹೊಸ ಆದೇಶದ ಪ್ರಕಾರ, ಶಾಲೆಗಳು, ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲು ಆದೇಶಿಸಲಾಗಿದೆ. ಆದರೆ ವರ್ಚುವಲ್ ತರಗತಿಗಳು ಮುಂದುವರಿಯುತ್ತವೆ. ಆದಾಗ್ಯೂ, ವೈದ್ಯಕೀಯ ಮತ್ತು ನರ್ಸಿಂಗ್ ಕಾಲೇಜುಗಳಿಗೆ ಸಾಮಾನ್ಯವಾಗಿ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಹೊಸ ನಿರ್ಬಂಧಗಳು ಜನವರಿ 15ರವರೆಗೆ ಜಾರಿಯಲ್ಲಿರುತ್ತವೆ.

Join Whatsapp
Exit mobile version