Home ಟಾಪ್ ಸುದ್ದಿಗಳು ರಾಜ್ಯಾದ್ಯಂತ ನೈಟ್ ಕರ್ಫ್ಯೂ, ದ.ಕ. ಸೇರಿ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿ

ರಾಜ್ಯಾದ್ಯಂತ ನೈಟ್ ಕರ್ಫ್ಯೂ, ದ.ಕ. ಸೇರಿ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿ

ಬೆಂಗಳೂರು: ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು, ಕೊಡಗು, ಮಂಗಳೂರು, ವಿಜಯಪುರ, ಬೆಳಗಾವಿ, ಬಾಗಲಕೋಟೆ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದೆ ಎಂದು ತಿಳಿಸಿದರು.

Join Whatsapp
Exit mobile version