ಓಮಿಕ್ರಾನ್ ಭೀತಿ : ನಾಳೆಯಿಂದ ಉತ್ತರ ಪ್ರದೇಶದಲ್ಲಿ ನೈಟ್ ಕರ್ಫ್ಯೂ ಜಾರಿ

Prasthutha|

ಲಕ್ನೋ: ಓಮಿಕ್ರಾನ್ ಹರಡುತ್ತಿರುವ ಭೀತಿಯ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಾದ್ಯಂತ ನೈಟ್ ಕರ್ಫ್ಯೂ ಜಾರಿಗೊಳಿಸಲು ಸರ್ಕಾರ ಅದೇಶ ನೀಡಿದೆ. ಈ ಆದೇಶದನ್ವಯ ರಾತ್ರಿ 11 ರಿಂದ ಬೆಳಿಗ್ಗೆ 5 ರವರೆಗೆ ಸಾರ್ವಜನಿಕ ಸಂಚಾರವನ್ನು ನಿರ್ಬಂಧಿಸಲಾಗಿದೆ.

- Advertisement -

ಮಾತ್ರವಲ್ಲ ಮದುವೆ ಮತ್ತು ಸಾಮಾಜಿಕ ಕಾರ್ಯಗಳಿಗೆ ಕೋವಿಡ್ ಮಾರ್ಗಸೂಚಿಗಳೊಂದಿಗೆ ಕೇವಲ 200 ಜನರಿಗೆ ಮಾತ್ರ ಅನುಮತಿ ನೀಡಲಾಗಿದೆ.

ಮಧ್ಯಪ್ರದೇಶದ ನಂತರ ಉತ್ತರ ಪ್ರದೇಶ ನೈಟ್ ಕರ್ಫ್ಯೂ ಜಾರಿಗೊಳಿಸಿದ ಎರಡನೇ ರಾಜ್ಯವಾಗಿದೆ.



Join Whatsapp