ದ.ಕ.ಜಿಲ್ಲೆಯಲ್ಲಿ ರಾತ್ರಿ ನಿರ್ಬಂಧ ಮತ್ತೆರಡು ದಿನ ವಿಸ್ತರಣೆ: ಜಿಲ್ಲಾಧಿಕಾರಿ ಡಾ.ರಾಜೇಂದ್ರ

Prasthutha|

ಮಂಗಳೂರು: ಸುರತ್ಕಲ್ ಫಾಝಿಲ್ ಹತ್ಯೆಯ ಬಳಿಕ ದಕ್ಷಿಣ ಕನ್ನಡ ಜಿಲ್ಲಾದ್ಯಂತ  ರಾತ್ರಿ ವೇಳೆ ಹೇರಲಾಗಿರುವ ನಿರ್ಬಂಧವನ್ನು ಇನ್ನೂ ಎರಡು ದಿನಗಳ ಕಾಲ ವಿಸ್ತರಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

- Advertisement -

ಸುಳ್ಯದಲ್ಲಿ ಮಸೂದ್, ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ಸುರತ್ಕಲ್ ನಲ್ಲಿ ಫಾಝಲ್ ಎಂಬ ಯುವಕನ ಹತ್ಯೆಯಾಗಿತ್ತು. ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಜು.29ರಂದು ರಾತ್ರಿಯಿಂದ ನಿರ್ಬಂಧ ಹೇರಲಾಗಿತ್ತು. ಇದೀಗ ಪೊಲೀಸರ ಮನವಿ ಮೇರೆಗೆ ಜಿಲ್ಲಾಧಿಕಾರಿ ಮತ್ತೆರಡು ದಿನ ಅಂದರೆ ಗುರುವಾರದವರೆಗೆ ನಿರ್ಬಂಧವನ್ನು ವಿಸ್ತರಿಸಿದ್ದಾರೆ.

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳುವುದು ಅತಿ ಅವಶ್ಯಕವಾಗಿರುವ ಹಿನ್ನೆಲೆಯಲ್ಲಿ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಸೂಕ್ತ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಭಾರತೀಯ ದಂಡ ಪ್ರಕ್ರಿಯೆ ಸಂಹಿತೆ 1973ರ ಕಲಂ 144 ರನ್ವಯ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 2022ರ ಜು.29ರಿಂದ 2022ರ ಆಗಸ್ಟ್ 1ರ ವರೆಗೆ ಸಂಜೆ 6 ರಿಂದ ಬೆಳಿಗ್ಗೆ 6 ಗಂಟೆಯ ವರೆಗೆ ಕೆಲವು ನಿರ್ಬಂಧಗಳನ್ನು ಜಾರಿಗೊಳಿಸಿದ್ದರು.  

Join Whatsapp