ಬೆಂಗಳೂರು : ಹೊಸ ರೂಪಾಂತರಗೊಂಡ ಕೊರೊನ ವೈರಸ್ ಸೋಂಕಿನ ಭೀತಿಯಿಂದ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ವಿಧಿಸಲು ಮುಂದಾಗಿದ್ದ ರಾಜ್ಯ ಸರಕಾರ, ವ್ಯಾಪಕ ಸಾರ್ವಜನಿಕ ಟೀಕೆಯ ಬಳಿಕ, ಕರ್ಫ್ಯೂ ಆದೇಶವನ್ನು ಹಿಂಪಡೆದಿದೆ.
ತರಾತುರಿಯಲ್ಲಿ ಸಿಎಂ ಯಡಿಯೂರಪ್ಪ ರಾತ್ರಿ 11 ಗಂಟೆಯಿಂದ ಬೆಳಗ್ಗೆ 5 ಗಂಟೆ ವರೆಗೆ ಕರ್ಫ್ಯೂ ಘೋಷಿಸಿದ್ದರು. ಆದರೆ, ಈ ಬಗ್ಗೆ ಸೋಶಿಯಲ್ ಮೀಡಿಯಾ ಸೇರಿದಂತೆ ಭಾರೀ ಟೀಕೆ ವ್ಯಕ್ತವಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಈ ಆದೇಶವನ್ನು ಭಾರೀ ಟ್ರೋಲ್ ಮಾಡಲಾಗಿತ್ತು.
ಈ ಕುರಿತಂತೆ ಸಿಎಂ ಯಡಿಯೂರಪ್ಪ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಕೊರೋನಾ ಭೀತಿಯ ನಿಯಂತ್ರಣಕ್ಕಾಗಿ ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿತ್ತು. ಆದರೆ ಇಂತಹ ರಾತ್ರಿ ಕರ್ಪ್ಯೂ ಅಗತ್ಯವಿಲ್ಲ ಎನ್ನುವ ಅಭಿಪ್ರಾಯವನ್ನು ಅನೇಕರು ವ್ಯಕ್ತ ಪಡಿಸಿದ್ದಾರೆ. ಇದರಿಂದಾಗಿ ಇಂದು ರಾತ್ರಿಯಿಂದ ಜಾರಿಗೆ ಬರಲಿದ್ದ ನೈಟ್ ಕರ್ಪ್ಯೂ ಆದೇಶವನ್ನು ವಾಪಾಸ್ ಪಡೆಯಲಾಗಿದೆ ಎಂದು ಹೇಳಲಾಗಿದೆ.