BMTC ಬಸ್​​ನಲ್ಲಿ ರಾತ್ರಿ ಪ್ರಯಾಣದ ಹೆಚ್ಚುವರಿ ಟಿಕೆಟ್​ ಶುಲ್ಕ ರದ್ದು

Prasthutha|

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ರಾತ್ರಿ 11 ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ಪ್ರಯಾಣಿಸುವ ಪ್ರಯಾಣಿಕರಿಗೆ ಸಾಮಾನ್ಯ ದರಕ್ಕಿಂತ 1.5 ಪಟ್ಟು ಹೆಚ್ಚು ಹಣ ಪಡೆಯುತ್ತಿತ್ತು. ಆದರೆ ಶೀಘ್ರದಲ್ಲೇ ಇದನ್ನು ರದ್ದುಪಡಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

- Advertisement -

 ಇನ್ನು ಸೆಪ್ಟೆಂಬರ್​ 25ಕ್ಕೆ ಬಿಎಂಟಿಸಿ ಆರಂಭವಾಗಿ 25 ವರ್ಷ ಪೂರೈಸಲಿದೆ. ಈ ರಜತ ಮಹೋತ್ಸವ ದಿನದಂದೇ ‘ನಮ್ಮ ಬಿಎಂಟಿಸಿ’ ಬಸ್ ಟ್ರ್ಯಾಕಿಂಗ್ ಮೊಬೈಲ್​ ಆ್ಯಪ್ ಅನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

ಸೋಮವಾರ ನಗರದ ಕಲಾಸಿಪಾಳ್ಯ ಬಸ್ ನಿಲ್ದಾಣವನ್ನು ಪರಿಶೀಲಿಸಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮತನಾಡಿದ ಅವರು ಈ ಆ್ಯಪ್ ಮೂಲಕ ಪ್ರಯಾಣಿಕರು ಬಿಎಂಟಿಸಿ ಬಸ್‌ಗಳನ್ನು ಟ್ರ್ಯಾಕ್ ಮಾಡಬಹುದಾಗಿದೆ. ಮತ್ತು ಈ ಆ್ಯಪ್​ನಲ್ಲಿ ಪ್ರಯಾಣದ ಟಿಕೆಟ್​ ಕೂಡ ಪಡೆಯಬಹುದಾಗಿದೆ ಎಂದರು.

- Advertisement -

ಈ ಆ್ಯಪ್​ ಅನ್ನು 2022 ರ ಡಿಸೆಂಬರ್​​ನಲ್ಲಿ ಮತ್ತು ನಂತರ 2023 ರ ಜನವರಿ ಮತ್ತು ಮಾರ್ಚ್​ನಲ್ಲಿ ಪ್ರಾರಂಭಿಸಲು ನಿರೀಕ್ಷಿಸಲಾಗಿತ್ತು. ಆದರೆ ತಾಂತ್ರಿಕ ದೋಷಗಳು ಮತ್ತು ಇತರ ಸಮಸ್ಯೆಗಳನ್ನು ಸರಿಪಡಿಸಿ ಅನಾವರಣಗೊಳಿಸಲು ವಿಳಂಬವಾಯಿತು.

ಇತ್ತೀಚಿಗೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKSRTC) ಬಸ್​ಗಳಲ್ಲಿ ಯುಪಿಐ ಮೂಲಕ ಟಿಕೆಟ್​ ಕೊಂಡುಕೊಳ್ಳುವ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಪರಿಚಯಿಸಲಾಗಿದೆ. ಇದು ಯಶಸ್ವಿಯಾದರೇ ಬಿಎಂಟಿಸಿ ಮತ್ತು ಕೆಎಸ್​ಆರ್​ಟಿಸಿ ಬಸ್​​ಗಳಲ್ಲೂ ಪರಿಚಯಿಸಲಾಗುವುದು ಎಂದು ಸಚಿವರು ತಿಳಿಸಿದರು.

Join Whatsapp