Home ಟಾಪ್ ಸುದ್ದಿಗಳು ಸಿಎಂ ಆದಿತ್ಯನಾಥ್​ ಭೇಟಿಯಾದ ನಿಖಿಲ್ ಕುಮಾರಸ್ವಾಮಿ: ಮೈತ್ರಿ ವಿಚಾರವಾಗಿ ಚರ್ಚೆ

ಸಿಎಂ ಆದಿತ್ಯನಾಥ್​ ಭೇಟಿಯಾದ ನಿಖಿಲ್ ಕುಮಾರಸ್ವಾಮಿ: ಮೈತ್ರಿ ವಿಚಾರವಾಗಿ ಚರ್ಚೆ

ಬೆಂಗಳೂರು: ಬಿಜೆಪಿ-ಜೆಡಿಎಸ್ ಮೈತ್ರಿ ಬೆನ್ನಲ್ಲೇ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿ ಬಿಜೆಪಿ ಜೊತೆಗಿನ ಮೈತ್ರಿ ವಿಚಾರವಾಗಿ ಚರ್ಚೆ ನಡೆಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ನಿಖಿಲ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೀ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಾಯಿತು. ಲೋಕಸಭೆ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಆಗಿರುವ ಜೆಡಿಎಸ್ – ಬಿಜೆಪಿ ಮೈತ್ರಿಯ ಬಗ್ಗೆ ಅವರೊಂದಿಗೆ ಚರ್ಚಿಸಲಾಯಿತು. ಇದು ಅತ್ಯಂತ ಉತ್ತಮ ಬೆಳವಣಿಗೆ ಎಂದು ಅವರು ಸಂತಸ ವ್ಯಕ್ತಪಡಿಸಿದರು. ಇದೇ ವೇಳೆ ಉತ್ತರ ಪ್ರದೇಶ ರಾಜಕಾರಣದ ಹಲವಾರು ಬೆಳವಣಿಗೆಗಳನ್ನು ಅವರು ಹಂಚಿಕೊಂಡರು. ಅವರು ಅತ್ಯಂತ ಪ್ರೀತಿ, ವಾತ್ಸಲ್ಯದಿಂದ ನನ್ನನ್ನು ಬರಮಾಡಿಕೊಂಡು ಆಶೀರ್ವದಿಸಿದರು. ಪ್ರೀತಿಯಿಂದ ಸತ್ಕರಿಸಿದ ನಿಮಗೆ ಧನ್ಯವಾದಗಳು ಯೋಗಿ ಜೀ… ಎಂದು ನಿಖಿಲ್ ಫೋಸ್ ಹಂಚಿಕೊಂಡಿದ್ದಾರೆ.

Join Whatsapp
Exit mobile version