ಲೋಕಸಭೆ ಚುನಾವಣೆಗೆ ನಿಖಿಲ್ -ವಿಜಯೇಂದ್ರ ಸಹೋದರರಂತೆ ಒಟ್ಟಾಗಿ ಹೋಗುತ್ತಾರೆ: ಹೆಚ್​ಡಿಕೆ

Prasthutha|

ರಾಮನಗರ: ಇದೇ ಮೊದಲ ಬಾರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಹೆಚ್.ಡಿ. ಕುಮಾರಸ್ವಾಮಿಯನ್ನು ಭೇಟಿ‌ಮಾಡಿ ದೀರ್ಘ ಮಾತುಕತೆ ನಡೆಸಿದ್ದಾರೆ. ಈ‌ ಬಗ್ಗೆ ಮಾತನಾಡಿದ ಕುಮಾರಸ್ವಾಮಿ, ಬಹಳ ದಿನಗಳ ಹಿಂದೆಯೇ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ ಮಾಡಬೇಕಿತ್ತು. ಬಿಝಿ ಕಾರಣ ಆಗಿರಲಿಲ್ಲ. ಇವತ್ತು ರಾಜ್ಯದ ಅಭಿವೃದ್ಧಿ ದೃಷ್ಟಿಯ ಉದ್ದೇಶದಿಂದ ಭೇಟಿಯಾಗಿದ್ದೇವೆ ಎಂದು ತಿಳಿಸಿದ್ದಾರೆ.

- Advertisement -

ರಾಮನಗರ ಜಿಲ್ಲೆಯ ಬಿಡದಿಯಲ್ಲಿರುವ ಕೇತುಗಾನಹಳ್ಳಿ ಗ್ರಾಮದ ತೋಟದ ಮನೆಯಲ್ಲಿ ಹೆಚ್​.ಡಿ ಕುಮಾರಸ್ವಾಮಿ ಮಾತನಾಡಿದರು.ಮುಂದೆ ಎರಡು ಪಕ್ಷಗಳು ರಾಜ್ಯದ ಅಭಿವೃದ್ಧಿಗಾಗಿ ಮತ್ತು ಜನರ ಹಿತದೃಷ್ಟಿಯಿಂದ ಒಂದಾಗಿ ಕೆಲಸ ಮಾಡುತ್ತದೆ. 2024 ರ ಚುನಾವಣೆಯಲ್ಲಿ ಮತ್ತೆ ನರೇಂದ್ರ ಮೋದಿ ಅವರು ಗೆದ್ದು ಪ್ರಧಾನಿ ಆಗುವುದಕ್ಕೆ ಕಾರ್ಯತಂತ್ರ ಇಂದಿನ ಭೇಟಿಯ ಉದ್ದೇಶವಾಗಿತ್ತು. ಮೋದಿ ಮತ್ತೆ ದೇಶದ ಪ್ರಧಾನಮಂತ್ರಿ ಆಗುವ ನಿಟ್ಟಿನಲ್ಲಿ ಕೂತು ಚರ್ಚೆ ಮಾಡಿದ್ದೇವೆ. ಈ ಭೇಟಿಯಲ್ಲಿ ಲೋಕಸಭಾ ಚುನಾವಣೆ ಸೀಟು ಹಂಚಿಕೆ ವಿಚಾರ ಬಗ್ಗೆ ಯಾವುದೇ ಮಾತಾಡಿಲ್ಲ. ಆ ಬಗ್ಗೆ ಕೇಂದ್ರ ನಾಯಕರು ಕುಳಿತು ಚರ್ಚೆ ಮಾಡುತ್ತಾರೆ ಎಂದರು.

ಯುವ ರಾಜ್ಯಾಧ್ಯಕ್ಷರ ನೇಮಕದಿಂದ ಕಾರ್ಯಕರ್ತರ ಹುರುಪು ಹೆಚ್ಚಾಗಿದೆ. ಅದಕ್ಕಾಗಿ ವಿಜಯೇಂದ್ರ ಅವರ ಶ್ರಮ ಹಾಕುತ್ತಿರುವುದನ್ನು ನೋಡುತ್ತಿದ್ದೇನೆ. 2006-07 ರಲ್ಲಿ ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ ಹಾಗು ನಾನು ಸರ್ಕಾರ ನಡೆಸಿದ್ದೆವು. ಇವತ್ತು ಸಹ ಅಂತಹ ಸರ್ಕಾರ ಬರಬೇಕು ಅನ್ನೋದು ಜನರ ಅಭಿಪ್ರಾಯ ಇದೆ ಎಂದೂ ಕುಮಾರಸ್ವಾಮಿ ಹೇಳಿದರು.



Join Whatsapp