Home ಟಾಪ್ ಸುದ್ದಿಗಳು ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಪ್ರಕರಣ: 9 ಮಂದಿ ಬಿಜೆಪಿ ಕಾರ್ಯಕರ್ತರ ಬಂಧನ

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಪ್ರಕರಣ: 9 ಮಂದಿ ಬಿಜೆಪಿ ಕಾರ್ಯಕರ್ತರ ಬಂಧನ

ಮಡಿಕೇರಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಪ್ರಕರಣದಲ್ಲಿ 9 ಮಂದಿ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಕುಶಾಲನಗರ ಸಮೀಪದ ಗುಡ್ಡೆಹೊಸೂರಿನಲ್ಲಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆಯಲಾಗಿತ್ತು. ಬಳಿಕ ಘಟನೆಯ ವಿರುದ್ಧ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದರು. ಇವತ್ತು ಕೊಡಗು ಎಸ್.ಪಿ ಕಚೇರಿ ಮುಂದೆ ಕಾಂಗ್ರೆಸ್ ಪ್ರತಿಭಟನೆಗೆ ಕರೆ ನೀಡಿದ್ದಾರೆ.

ಈ ನಡುವೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಕ್ರಮಕ್ಕೆ ಮುಂದಾದ ಪೊಲೀಸರು, ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ ನಂತರ, 9 ಮಂದಿ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿ, ಆರೋಪಿಗಳನ್ನು ತಡರಾತ್ರಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು.

Join Whatsapp
Exit mobile version