ಅಸ್ಸಾಂ ಭೀಕರ ಅಪಘಾತಕ್ಕೆ ಸ್ಥಳದಲ್ಲೇ 9 ಮಂದಿ ಬಲಿ !

Prasthutha|

ಕರೀಗಂಜ್ : ಅಸ್ಸಾಂ ತ್ರಿಪುರಾ ಗಡಿ ಭಾಗದ ಕರೀಂಗಂಜ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ 9 ಮಂದಿ ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ. ಕರೀಂಗಂಜ್ ಜಿಲ್ಲೆಯ ಬೈತಖಾಲ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 9 ಮಂದಿ ಮೃತಪಟ್ಟು ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.

- Advertisement -

ಮೃತರು ಪ್ರಯಾಣಿಸುತ್ತಿದ್ದ ಆಟೋ ರಿಕ್ಷಾಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಛಾತ್ ಪೂಜೆ ಸಲ್ಲಿಸಿ ಹಿಂತಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ಎನ್ನಲಾಗುತ್ತಿದ್ದು, ಸ್ಥಳಕ್ಕೆ ಪೊಲೀಸರು ಧಾವಿಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

Join Whatsapp