Home ಜಾಲತಾಣದಿಂದ ಬಳ್ಳಾರಿ: ಮೆಂಥೋಪ್ಲಸ್ ಡಬ್ಬಿ ನುಂಗಿ 9 ತಿಂಗಳ ಮಗು ಮೃತ್ಯು

ಬಳ್ಳಾರಿ: ಮೆಂಥೋಪ್ಲಸ್ ಡಬ್ಬಿ ನುಂಗಿ 9 ತಿಂಗಳ ಮಗು ಮೃತ್ಯು

ಪೋಷಕರೊಂದಿಗೆ ಮಗು ಪ್ರಿಯದರ್ಶಿನಿ

ಬಳ್ಳಾರಿ: ಮೆಂಥೋಪ್ಲಸ್ ಡಬ್ಬಿ ನುಂಗಿ 9 ತಿಂಗಳ ಮಗು ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆ ಕಂಪ್ಲಿ ಪಟ್ಟಣದ 5ನೇ ವಾರ್ಡ್​ನ ಇಂದಿರಾನಗರದಲ್ಲಿ ನಡೆದಿದೆ.

ಮುತ್ಯಾಲ ರಾಘವೇಂದ್ರ ಮತ್ತು ತುಳಸಿ ದಂಪತಿಗಳ ಪುತ್ರಿ ಪ್ರಿಯದರ್ಶಿನಿ ಮೃತಪಟ್ಟ ಮಗು.

ಆಟವಾಡುತ್ತಿದ್ದಾಗ ಕೈಗೆ ಸಿಕ್ಕಿದ ಮೆಂಥೋಪ್ಲಸ್​​ನ ಚಿಕ್ಕ ಡಬ್ಬಿಯನ್ನು ಮಗು ನುಂಗಿದೆ. ಇದಾದ ನಂತರ ಮಗುವಿಗೆ ಉಸಿರಾಟ ತೊಂದರೆ ಹೆಚ್ಚಾಗಿದ್ದು ಖಾಸಗಿ ವೈದ್ಯರ ಬಳಿಗೆ ಪೋಷಕರು ಕರೆದುಕೊಂಡು ಹೋಗಿದ್ದಾರೆ.

ಮಗುವನ್ನು ಪರೀಕ್ಷಿಸಿದ ವೈದ್ಯರು, ಮಾರ್ಗಮಧ್ಯೆಯೇ ಮೃತಪಟ್ಟಿದೆ ಎಂದು ದೃಢಪಡಿಸಿದ್ದಾರೆ. ಈ ದಂಪತಿಗೆ ವಿವಾಹವಾಗಿ 10 ವರ್ಷಗಳ ನಂತರ ಈ ಮಗು ಜನಿಸಿತ್ತು.

Join Whatsapp
Exit mobile version