ನರಗುಂದ ಗಲಭೆ, ಹತ್ಯೆ ತಡೆಯುವಲ್ಲಿ ಕರ್ತವ್ಯ ಲೋಪ: ಇನ್ಸ್ ಪೆಕ್ಟರ್ ಅಮಾನತು

Prasthutha|

ನರಗುಂದ: ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಮುಸ್ಲಿಮ್ ಯುವಕನ ಹತ್ಯೆ ಮತ್ತು ಅದಕ್ಕೂ ಮೊದಲು ನಡೆದ ಗಲಭೆ ಪ್ರಕರಣದಲ್ಲಿ ಕರ್ತವ್ಯ ಲೋಪವೆಸಗಿದ ಆರೋಪದಲ್ಲಿ ನರಗುಂದ ಇನ್ಸ್ಪೆಕ್ಟರ್ ನಂದೀಶ್ವರ ಕುಂಬಾರ ಅವರನ್ನು ಅಮಾನತುಗೊಳಿಸಲಾಗಿದೆ.

- Advertisement -

ಉತ್ತರ ವಲಯದ ಐಜಿಪಿ ಎನ್ ಸತೀಶ್ ಕುಮಾರ್ ಅವರು ಅಮಾನತುಗೊಳಿಸಿದ್ದಾರೆ ಎಂದು ಎಸ್ಪಿ ಶಿವಪ್ರಕಾಶ್ ದೇವರಾಜು ಮಾಹಿತಿ ನೀಡಿದ್ದಾರೆ. ನರಗುಂದ ಪಟ್ಟಣದಲ್ಲಿ ಕಳೆದ ಹಲವು ದಿನಗಳಿಂದ ಎರಡು ಸಮುದಾಯದ ಯುವಕರ ಮಧ್ಯ ಸಣ್ಣ ಪುಟ್ಟ ಕಲಹ ನಡೆಯುತ್ತಲೇ ಇತ್ತು. ಒಂದು ಹಂತದಲ್ಲಿ ಉರ್ದು ಶಾಲೆಗೆ ನುಗ್ಗಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆದಿತ್ತು. ಆ ನಂತರ ಪಟ್ಟಣದಲ್ಲಿ ಬೂದಿ ಮುಚ್ಚಿದ ಕೆಂಡದಂತ ವಾತಾವರಣ ಇತ್ತು. ಇತ್ತೀಚೆಗೆ ಬಜರಂಗದಳದ ಮುಖಂಡ ಠಾಣೆಯಲ್ಲಿ ಮುಸ್ಲಿಂ ಸಮುದಾಯದ ಮೇಲೆ ಹರಿಹಾಯ್ದು ದ್ವೇಷ ಭಾಷಣ ಮಾಡಿದ್ದ ನಂತರ ಅಂದೇ ರಾತ್ರಿ (ಜನವರಿ 17) ಅಮಾಯಕ ಯುವಕ ಸಮೀರ್ ಶಹಪುರ ಅವರ ಕೊಲೆಯಾಗಿತ್ತು. ಪಟ್ಟಣದಲ್ಲಿ ಇಷ್ಟೆಲ್ಲಾ ನಡೆಯುತ್ತಿದ್ದರೂ ಅದನ್ನು ತಡೆಯುವಲ್ಲಿ ಪೊಲೀಸರು ವೈಫಲ್ಯ ತೋರಿದ್ದರು.

ಈ ಹಿನ್ನೆಲೆಯಲ್ಲಿ ಇನ್ಸ್ಪೆಕ್ಟರ್ ನಂದೀಶ್ವರ ಕುಂಬಾರ ಅವರನ್ನು ಅಮಾನತುಗೊಳಿಸಲಾಗಿದೆ.

Join Whatsapp