ಬಾಲನಟಿ ವಂಶಿಕಾ ಹೆಸರಿನಲ್ಲಿ 40 ಲಕ್ಷ ರೂ. ವಂಚನೆ: ಯುವತಿ ಬಂಧನ

Prasthutha|

ಬೆಂಗಳೂರು: ಸ್ಯಾಂಡಲ್‌ವುಡ್ ನಟ, ನಿರೂಪಕ ಮಾಸ್ಟರ್ ಆನಂದ್ ಪುತ್ರಿ, ಬಾಲನಟಿ ವಂಶಿಕಾ ಹೆಸರು ಬಳಸಿ ಮಹಿಳೆಯೊಬ್ಬಳು ವಂಚನೆ ಮಾಡಿರುವ ಆರೋಪದ ಮೇಲೆ ಮಾಸ್ಟರ್ ಆನಂದ್ ಪತ್ನಿ ಯಶಸ್ವಿನಿ ಸದಾಶಿವನಗರ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಯಶಸ್ವಿನಿ ಜೊತೆ ಮೋಸ ಹೋಗಿರುವ ಇತರರಿಂದ ನಿಶಾ ವಿರುದ್ಧ ದೂರು ದಾಖಲಿಸಲಾಗಿದೆ. ಸದ್ಯ ಆರೋಪಿ ನಿಶಾರನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಮಕ್ಕಳ ಟ್ಯಾಲೆಂಟ್ ಶೋ, ಮಕ್ಕಳ ಮಾಡೆಲಿಂಗ್, ಇವೆಂಟ್ ಮ್ಯಾನೇಜ್‌ಮೆಂಟ್ ನಡೆಸುತ್ತೇನೆ ಎಂದು ಹೇಳಿ ಮಕ್ಕಳ ಪೋಷಕರಿಂದ ಲಕ್ಷಾಂತರ ರೂ. ಹಣವನ್ನು ನಿಶಾ ನಂಬಿಸಿ ದೋಚಿದ್ದಾರೆ ಎನ್ನಲಾಗುತ್ತಿದೆ. ಸಾಕಷ್ಟು ಜನರಿಂದ ಹಣ ಪಡೆದು ಮೋಸ ಹೋದ ಕೆಲವರು ನಿಶಾರ ವಿರುದ್ಧ ದೂರು ನೀಡುವ ಮೂಲಕ ಕಿಡಿಕಾರಿದ್ದಾರೆ. ಹೀಗಿರುವಾಗ ಈ ನಡುವೆ ಮಾಸ್ಟರ್ ಆನಂದ್‌ರ ಪುತ್ರಿ ವಂಶಿಕಾ ಹೆಸರು ಹೇಳಿಕೊಂಡು ಹಲವರಿಗೆ ಮೋಸ ಮಾಡಿದ್ದಾರಂತೆ ನಿಶಾ ನರಸಪ್ಪ. ವಂಶಿಕಾ ಹೆಸರನ್ನು ದುರ್ಬಳಕೆ ಮಾಡಿಕೊಂಡು ಸುಮಾರು 40 ಲಕ್ಷ ರೂ. ಹಣವನ್ನು ಪಡೆದಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ನಿಶಾರ ಮೋಸಕ್ಕೆ ಒಳಗಾದವರು, ವಂಶಿಕಾರ ತಾಯಿ ಯಶಸ್ವಿನಿ ಆನಂದ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ನಿಶಾ ನರಸಪ್ಪಗೆ ವಂಚನೆಯೇ ಉದ್ಯೋಗವಾಗಿತ್ತು. ವಂಶಿಕಾ ಮಾತ್ರವೇ ಅಲ್ಲದೆ ಚಿತ್ರರಂಗದ ಹಲವರ ಹೆಸರಿನಲ್ಲಿ ಹಣ ಹಲವರಿಂದ ಹಣ ಪಡೆದಿದ್ದ ನಿಶಾ ಆ ನಂತರ ಹಣ ಪಡೆದವರ ಕರೆಗಳನ್ನು ರಿಸೀವ್ ಮಾಡುತ್ತಿರಲಿಲ್ಲವಂತೆ, ಕರೆ ಮಾಡಿದರೂ ದರ್ಪದಿಂದ ಮಾತನಾಡುತ್ತಿದ್ದರಂತೆ. ಹೀಗೆ ವಂಚನೆ ಹಣದಿಂದಲೇ ಐಶಾರಾಮಿ ಜೀವನವನ್ನು ನಿಶಾ ನರಸಪ್ಪ ನಡೆಸುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.  ಆದರೆ ಈಗ ನಿಶಾ ಬಂಧನಕ್ಕೆ ಒಳಗಾಗಿದ್ದಾರೆ.

Join Whatsapp