ಮುಂಬೈ: ಕೇಂದ್ರ ಸರ್ಕಾರವು ಸಕಾಲದಲ್ಲಿ ಸಮಯೋಚಿತ ನಿರ್ಧಾರಗಳನ್ನು ತೆಗೆದುಕೊಳ್ಳದಿರುವುದೇ ಸಮಸ್ಯೆಗಳಿಗೆ ಕಾರಣ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ.
ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಎಂಜಿನಿಯರ್ಸ್ ಮುಂಬೈನಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು “‘ತಂತ್ರಜ್ಞಾನ ಅಥವಾ ಸಂಪನ್ಮೂಲಗಳಿಗಿಂತ ಸಮಯವು ಹೆಚ್ಚು ಮುಖ್ಯವಾಗಿದೆ. ಸಮಯವು ಅತಿ ದೊಡ್ಡ ಬಂಡವಾಳವಾಗಿದೆ. ಸರ್ಕಾರವು ಸರಿಯಾದ ಸಮಯಕ್ಕೆ ನಿರ್ಧಾರಗಳನ್ನು ತೆಗೆದುಕೊಳ್ಳದಿರುವುದು ದೊಡ್ಡ ಸಮಸ್ಯೆಯಾಗಿದೆ” ಎಂದು ಮೂಲಸೌಕರ್ಯ ಅಭಿವೃದ್ಧಿಯ ಅನುಭವಿ ಗಡ್ಕರಿ ಹೇಳಿದರು.
ಕಳೆದ ವಾರ ಅವರನ್ನು ತನ್ನ ಸಂಸದೀಯ ಮಂಡಳಿಯಿಂದ ಕೈಬಿಡುವ ಬಿಜೆಪಿಯ ನಿರ್ಧಾರದ ಹಿನ್ನೆಲೆಯಲ್ಲಿ ಈ ಹೇಳಿಕೆಗಳುಬಂದಿವೆ ಎಂದು ತಿಳಿದು ಬಂದಿದೆ.