ಡೀಸೆಲ್ ವಾಹನಗಳ ಮೇಲೆ ಹೆಚ್ಚುವರಿ ಶೇ 10ರಷ್ಟು ತೆರಿಗೆ: ಸ್ಪಷ್ಟನೆ ನೀಡಿದ ನಿತಿನ್ ಗಡ್ಕರಿ

Prasthutha|

ನವದೆಹಲಿ: ‘ವಾಯು ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಡೀಸೆಲ್ ವಾಹನ ಖರೀದಿ ಮೇಲೆ ಜಿಎಸ್ ಟಿ ಮಾದರಿಯಲ್ಲೇ ಮಾಲಿನ್ಯ ತೆರಿಗೆ ಎಂದು ಶೇ 10ರಷ್ಟು ಹೆಚ್ಚುವರಿ ತೆರಿಗೆ ವಿಧಿಸಲಾಗುವುದು’ ಎಂದು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ ಎಂದು ವರದಿಯಾಗಿದೆ.

- Advertisement -


ಈ ಕುರಿತು ಖುದ್ದು ಸಚಿವರೇ ಸ್ಪಷ್ಟನೆ ಕೊಟ್ಟಿದ್ದು, ಇಂತಹ ಯಾವುದೇ ಪ್ರಸ್ತಾವನೆಯು ಸರ್ಕಾರದ ಮುಂದಿಲ್ಲ ಎಂದು ತಿಳಿಸಿದ್ದಾರೆ.


ನವದೆಹಲಿಯಲ್ಲಿ ಇಂದು ನಡೆದ ಭಾರತೀಯ ಆಟೋಮೊಬೈಲ್ ತಯಾರಕರ ಸಂಘದ (ಎಸ್ಐಎಎಂ) 63ನೇ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದ ಸಚಿವರು, ”ಹೆಚ್ಚುತ್ತಿರುವ ಮಾಲಿನ್ಯದ ಮಟ್ಟವು ನಾಗರಿಕರ ಆರೋಗ್ಯಕ್ಕೆ ಅಪಾಯವಾಗಿದೆ. ಡೀಸೆಲ್ ಚಾಲಿತ ವಾಹನಗಳ ಮೇಲೆ ಶೇ.10ರಷ್ಟು ಹೆಚ್ಚುವರಿ ಜಿಎಸ್ಟಿಯನ್ನು ಹಾಕಬೇಕೆಂದು ಕೋರಿ ನಾನು ಇಂದು ಸಂಜೆ ಹಣಕಾಸು ಸಚಿವರಿಗೆ ಪತ್ರವನ್ನು ಹಸ್ತಾಂತರಿಸಲಿದ್ದೇನೆ” ಎಂಬುವುದಾಗಿ ಹೇಳಿದ್ದಾರೆ ಎಂದು ವರದಿಯಾಗಿತ್ತು.

- Advertisement -


ಈ ಕುರಿತು ವರದಿ ಬೆನ್ನಲ್ಲೇ ಸಚಿವ ನಿತಿನ್ ಗಡ್ಕರಿ ಸಾಮಾಜಿಕ ಜಾಲತಾಣದ ‘ಎಕ್ಸ್’ನಲ್ಲಿ ಸ್ಪಷ್ಟನೆ ನೀಡಿದ್ದಾರೆ. ”ಡೀಸೆಲ್ ವಾಹನಗಳ ಮಾರಾಟದ ಮೇಲೆ ಹೆಚ್ಚುವರಿ ಶೇ.10ರಷ್ಟು ಜಿಎಸ್ಟಿಯನ್ನು ಸೂಚಿಸುವ ಮಾಧ್ಯಮ ವರದಿಗಳನ್ನು ಸ್ಪಷ್ಟಪಡಿಸುವ ತುರ್ತು ಅಗತ್ಯವಿದೆ. ಇಂತಹ ಯಾವುದೇ ಪ್ರಸ್ತಾವನೆಯು ಪ್ರಸ್ತುತ ಸರ್ಕಾರದ ಪರಿಗಣನೆಯಲ್ಲಿಲ್ಲ ಎಂಬುದನ್ನು ಸ್ಪಷ್ಟಪಡಿಸಲಾಗುತ್ತದೆ” ಎಂದು ಗಡ್ಕರಿ ತಿಳಿಸಿದ್ದಾರೆ.

Join Whatsapp