ರಷ್ಯಾ-ಉಕ್ರೇನ್ ಯುದ್ಧದಿಂದಾಗಿ ಇಂಧನ ಬೆಲೆ ಹೆಚ್ಚುತ್ತಿದೆ ಎಂದ ನಿತಿನ್ ಗಡ್ಕರಿ

Prasthutha|

ಮುಂಬೈ: ಕಳೆದ ನಾಲ್ಕು ದಿನಗಳಲ್ಲಿ ಮೂರು ಬಾರಿ ಇಂಧನ ಬೆಲೆ ಏರಿಕೆಯನ್ನು ಶುಕ್ರವಾರ ಸಮರ್ಥಿಸಿಕೊಂಡಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ, ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆಯಾಗಿದೆ, ಇದು ಭಾರತ ಸರ್ಕಾರದ ನಿಯಂತ್ರಣದಲ್ಲಿಲ್ಲ ಎಂದು ಹೇಳಿದ್ದಾರೆ.

- Advertisement -

ಶುಕ್ರವಾರ ಇಲ್ಲಿ ನಡೆದ ಎಬಿಪಿ ನೆಟ್ ವರ್ಕ್ ನ ಉದ್ಘಾಟನಾ ಶೃಂಗಸಭೆಯಲ್ಲಿ “ಹೊಸ ಭಾರತ, ಹೊಸ ಪ್ರಣಾಳಿಕೆ-ಸಬ್ ಕಾ ಸಾಥ್, ಸಬ್ ಕಾ ವಿಕಾಸ್” ಎಂಬ ಅಧಿವೇಶನದಲ್ಲಿ ಮಾತನಾಡಿದ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ  ಗಡ್ಕರಿ, “ಭಾರತ, ಶೇಕಡಾ 80 ರಷ್ಟು ತೈಲವನ್ನು ಆಮದು ಮಾಡಿಕೊಳ್ಳಲಾಗುತ್ತದೆ. ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದ ಮಧ್ಯೆ, ತೈಲ ಬೆಲೆಗಳು ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಏರಿಕೆಯಾಗಿವೆ ಮತ್ತು ಅದರ ಬಗ್ಗೆ ನಾವು ಏನನ್ನೂ ಮಾಡಲು ಸಾಧ್ಯವಿಲ್ಲ” ಎಂದು ಅವರು ಹೇಳಿದರು

Join Whatsapp