ಕೇಂದ್ರ ಸಂಪುಟದಲ್ಲಿ ನಾಲ್ಕು ಸಚಿವ ಸ್ಥಾನಕ್ಕೆ ನಿತೀಶ್ ಪಟ್ಟು!

Prasthutha|

ಮೋದಿಗೆ ತಲೆನೋವಾದ ಜೆಡಿಯು ಬೇಡಿಕೆ!

- Advertisement -

ನವದೆಹಲಿ: ಕೇಂದ್ರ ಸಚಿವ ಸಂಪುಟ ಪುನರ್ರಚನೆಯಲ್ಲಿ ಹೆಚ್ಚಿನ ಪ್ರಾತಿನಿಧ್ಯ ನೀಡುವಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜನತಾದಳ ಯುನೈಟೆಡ್ (ಜೆಡಿಯು) ಒತ್ತಾಯಿಸಿದೆ. ಕೇಂದ್ರ ಸಂಪುಟದಲ್ಲಿ ನಾಲ್ಕು ಸಚಿವ ಸ್ಥಾನಗಳನ್ನು ನೀಡಬೇಕೆಂದು ಜೆಡಿಯು ಒತ್ತಾಯಿಸಿದ್ದು, ಸಂಸದರ ಸಂಖ್ಯೆಗೆ ಅನುಗುಣವಾಗಿ ಸಚಿವ ಸ್ಥಾನವನ್ನು ನೀಡಬೇಕು ಎಂದು ಪಟ್ಟು ಹಿಡಿದಿದೆ.

ಕೇಂದ್ರ ಸಚಿವ ಸಂಪುಟದಲ್ಲಿ ಬಿಹಾರದಿಂದ ನಾಲ್ಕು ಮಂತ್ರಿಗಳು ಇರಲಿದ್ದಾರೆ ಎಂದು ಇತ್ತೀಚಿನ ವರದಿಗಳು ಹೇಳುತ್ತಿವೆ. ಇಬ್ಬರು ಜನತಾದಳ ಯುನೈಟೆಡ್ (ಜೆಡಿಯು), ಒಬ್ಬರು ಲೋಕ ಜನಶಕ್ತಿ ಪಕ್ಷ (ಎಲ್ಜೆಪಿ) ಮತ್ತು ಒಬ್ಬರು ಬಿಜೆಪಿಯಿಂದ ಸಚಿವ ಸ್ಥಾನಕ್ಕೆ ಆಯ್ಕೆಯಾಗಲಿದ್ದಾರೆ ಎಂದು ಹೇಳಲಾಗಿದೆ.

- Advertisement -

ಮೋದಿಯವರ ಸಂಪುಟದಲ್ಲಿ ಪಕ್ಷದಿಂದ ಕೇವಲ ಇಬ್ಬರನ್ನು ಸಚಿವ ಸ್ಥಾನಕ್ಕೆ ಆಯ್ಕೆ ಮಾಡಿರುವುದರಿಂದ ಜೆಡಿಯು ಪರೋಕ್ಷವಾಗಿ ಆಕ್ರೋಶ ವ್ಯಕ್ತಪಡಿಸಿದೆ. ಲೋಕಸಭೆಯಲ್ಲಿ ಸದಸ್ಯರ ಸಂಖ್ಯೆಯ ಆಧಾರದ ಮೇಲೆ ಸಚಿವ ಸ್ಥಾನವನ್ನು ನೀಡಬೇಕು. ಬಿಹಾರದಲ್ಲಿ ಬಿಜೆಪಿಯಲ್ಲಿ 17 ಸಂಸದರಿದ್ದಾರೆ. ಅದರಂತೆ ಬಿಜೆಪಿಯ ಐವರು ಸದಸ್ಯರಿಗೆ ಸಚಿವ ಸ್ಥಾನ ನೀಡಬಹುದು. ಜೆಡಿಯು 16 ಸಂಸದರನ್ನು ಹೊಂದಿರುವುದರಿಂದ ಕನಿಷ್ಠ ನಾಲ್ವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಜೆಡಿಯು ಮೂಲಗಳು ಆಗ್ರಹಿಸಿದೆ.

ಕೇಂದ್ರ ಸಚಿವ ಸಂಪುಟದ ಪುನರ್ರಚನೆ ಕುರಿತು ಬಿಜೆಪಿ ಹೈಕಮಾಂಡ್ ಕಸರತ್ತು ನಡೆಸುತ್ತಿರುವ ನಡುವೆಯೇ ಜೆಡಿಯು ಬೇಡಿಕೆಯು ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

Join Whatsapp