ಪಟ್ನಾ: ಜೆಡಿ(ಯು) ಪಕ್ಷಕ್ಕೆ ಆರ್.ಸಿ.ಪಿ. ಸಿಂಗ್ ರಾಜೀನಾಮೆ ಸಲ್ಲಿಸಿದ ಬಳಿಕ ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು ಉಲ್ಬಣಗೊಂಡಿದ್ದು, ಬಿಜೆಪಿ ಮೈತ್ರಿ ತೊರೆದು ಆರ್ ಜೆಡಿ ಜೊತೆ ಸರ್ಕಾರ ರಚನೆಗೆ ನಿತೀಶ್ ಕುಮಾರ್ ಮುಂದಾಗಿರುವುದರಿಂದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಆರ್ ಜೆಡಿ ಶಾಸಕ ತೇಜಸ್ವಿ ಅವರೊಂದಿಗೆ ಆಗಮಿಸಿ ರಾಜ್ಯಪಾಲರನ್ನು ಭೇಟಿಯಾದ ನಿತೀಶ್ ಕುಮಾರ್ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ಇದರೊಂದಿಗೆ ಬಿಜೆಪಿ- ಜೆಡಿಯು ಸರ್ಕಾರ ಪತನವಾದಂತಾಗಿದೆ.
ಬಿಹಾರದಲ್ಲಿ ಮುಂದೆ ಆರ್ ಜೆಡಿ -ಜೆಡಿಯು ಸರ್ಕಾರ ಅಧಿಕಾರಕ್ಕೆ ಬರುವುದು ನಿಚ್ಛಳವಾಗಿದೆ.