ರಾಜ್ಯಪಾಲ ಆರಿಫ್ ನಿವಾಸದ ಔತಣಕೂಟಕ್ಕೆ ಗೈರಾದ ನಿತೀಶ್ ಕುಮಾರ್…!

Prasthutha|

ಪಟ್ನಾ: ಗಣರಾಜ್ಯೋತ್ಸವ ಅಂಗವಾಗಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ರಾಜಭವನದಲ್ಲಿ ಭಾನುವಾರ ಏರ್ಪಡಿಸಿದ್ದ, ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಗೈರಾಗಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

- Advertisement -

ನಿತೀಶ್ ಕುಮಾರ್ ಅವರು ರಾಜ್ಯಪಾಲ ಆರಿಫ್‌ ಅವರೊಂದಿಗೆ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಪಾಲ್ಗೊಂಡಿದ್ದರು. ಆದರೆ, ರಾಜಭವನದಲ್ಲಿ ಆಯೋಜಿಸಿದ್ದ ಔತಣಕೂಟದಲ್ಲಿ ಭಾಗವಹಿಸಿರಲಿಲ್ಲ.

ರಾಜ್ಯಪಾಲರ ಔತಣಕೂಟದಲ್ಲಿ ಭಾಗವಹಿಸದೆ ಇರಲು ಜೆಡಿಯು ವರಿಷ್ಠರ ‘ಅಸಮರ್ಥತೆಯೇ’ ಪ್ರಮುಖ ಕಾರಣ ಎಂದು ವಿರೋಧ ಪಕ್ಷಗಳ ನಾಯಕರು ವಾಗ್ದಾಳಿ ನಡೆಸಿದ್ದಾರೆ.

- Advertisement -

‘ಗಣರಾಜ್ಯೋತ್ಸವದ ಪರೇಡ್‌ ಬಳಿಕ ನಿತೀಶ್ ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಜ್ವರದಿಂದ ಬಳಲುತ್ತಿದ್ದರು. ಹಾಗಾಗಿ ಅವರು ಔತಣಕೂಟದಲ್ಲಿ ಭಾಗವಹಿಸಲಿಲ್ಲ’ ಎಂದು ಸಿಎಂ ಆಪ್ತ ಮೂಲಗಳು ತಿಳಿಸಿವೆ.



Join Whatsapp