8ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಅಧಿಕಾರ ಸ್ವೀಕಾರ; ತೇಜಸ್ವಿ ಯಾದವ್ ಡಿಸಿಎಂ

Prasthutha|

ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಜೆಡಿಯು ವರಿಷ್ಠ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.

- Advertisement -

ಪಾಟ್ನಾದ ರಾಜಭವನದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಫಾಗು ಚೌಹಾಣ್ ಅವರು ನಿತೀಶ್ ಕುಮಾರ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಇದರೊಂದಿಗೆ 8ನೇ ಬಾರಿಗೆ ನಿತೀಶ್ ಕುಮಾರ್ ಮುಖ್ಯಮಂತ್ರಿಯಾದಂತಾಗಿದೆ.

 160 ಶಾಸಕರ ಬೆಂಬಲ ಪತ್ರವನ್ನು ರಾಜ್ಯಪಾಲ ಫಾಗು ಚೌಹಾಣ್ ಅವರಿಗೆ ನಿತೀಶ್ ಕುಮಾರ್ ಸಲ್ಲಿಸಿದ್ದರು. 

- Advertisement -

ನಿತೀಶ್ ಅವರು ಎನ್ ಡಿಎ ಮೈತ್ರಿಯನ್ನು ತೊರೆದು ಆರ್ ಜೆಡಿ, ಕಾಂಗ್ರೆಸ್, ಎಡಪಕ್ಷಗಳ ಬೆಂಬಲದಿಂದ ಸರ್ಕಾರ ರಚಿಸಿದ್ದಾರೆ. ಉಪ ಮುಖ್ಯಮಂತ್ರಿಯಾಗಿ ಆರ್ ಜೆಡಿಯ ತೇಜಸ್ವಿಯಾದವ್ ಪ್ರತಿಜ್ಞಾವಿಧಿ ಸ್ವೀಕರಿಸಿದರು.

Join Whatsapp