ಪಾಟ್ನಾ: ಜೆಡಿಯು – ಬಿಜೆಪಿ ನೇತೃತ್ವದ ನೂತನ ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೂಲಕ ನಿತೀಶ್ ಕುಮಾರ್ 9ನೇ ಬಾರಿ ಬಿಹಾರದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ರಾಜಭವನದಲ್ಲಿ ಆಯೋಜಿಸಿದ ಸಮಾರಂಭದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಪ್ರಮಾಣ ವಚನ ಬೋಧಿಸಿದರು. ಜೆಡಿಯು ನಾಯಕರಾದ ವಿಜಯ್ ಕುಮಾರ್ ಚೌಧರಿ ಮತ್ತು ಬಿಜೇಂದ್ರ ಪ್ರಸಾದ್ ಯಾದವ್ ಮತ್ತು ಬಿಜೆಪಿ ನಾಯಕರಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಸಿನ್ಹಾ ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಇಂದು ಬೆಳಿಗ್ಗೆ ನಿತೀಶ್ ರಾಜಭವವಕ್ಕೆ ತೆರಳಿ ನಿತೀಶ್ ಕುಮಾರ್ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ರಾಜೀನಾಮೆ ಪತ್ರ ಸಲ್ಲಿಸಿದ್ದರು.