November 24, 2020

ತಮಿಳುನಾಡಿಗೆ ಅಪ್ಪಳಿಸಲಿದೆ ನಿವಾರ್ ಚಂಡಮಾರುತ | ನಾಳೆ ರಾಜ್ಯಾದ್ಯಂತ ಸಾರ್ವತ್ರಿಕ ರಜೆ

ಚೆನ್ನೈ : ತಮಿಳುನಾಡು ಕರಾವಳಿಗೆ ನಾಳೆ ನಿವಾರ್ ಚಂಡಮಾರುತ ಅಪ್ಪಳಿಸಲಿದೆ. ಇದರ ಪರಿಣಾಮ ತಮಿಳುನಾಡು ಮತ್ತು ಪುದುಚೇರಿಯಲ್ಲಿ ಭಾರೀ ಮಳೆಯಾಗಲಿದ್ದು, ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ ತಮಿಳುನಾಡು ರಾಜ್ಯಾದ್ಯಂತ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಪುದುಚೇರಿಯಲ್ಲಿ ಮುಂದಿನ ಮೂರು ದಿನ ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.  

ಆಂಧ್ರ ಪ್ರದೇಶದ ಕರಾವಳಿಯಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ. ಜೊತೆಗೆ ಕರ್ನಾಟಕದಲ್ಲೂ ನಾಳೆಯಿಂದ ಎರಡು ದಿನ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಟಾಪ್ ಸುದ್ದಿಗಳು

ವಿಶೇಷ ವರದಿ