ಚಂಡೀಗಢ: ಪಂಜಾಬ್ ನಲ್ಲಿ ಲೋಕಸಭಾ ಚುನಾವಣೆಯನ್ನು ಏಕಾಂಗಿಯಾಗಿ ಎದುರಿಸುವುದಾಗಿ ಬಿಜೆಪಿ ಪ್ರಕಟಿಸಿದೆ. ಇದರೊಂದಿಗೆ ಶಿರೋಮಣಿ ಅಕಾಲಿ ದಳ (ಎಸ್ಎಡಿ) ಜತೆ ಮೈತ್ರಿ ಮಾಡಿಕೊಳ್ಳದಿರಲು ಬಿಜೆಪಿ ನಿರ್ಧರಿಸಿದೆ.
ಪಂಜಾಬ್ ನ 13 ಸ್ಥಾನಗಳಲ್ಲಿ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಸುನೀಲ್ ಜಾಖರ್ ಘೋಷಿಸಿದ್ದಾರೆ. ಜನರ ಮತ್ತು ಕಾರ್ಯಕರ್ತರ ಅಭಿಪ್ರಾಯದ ನಂತರ ಬಿಜೆಪಿ ರಾಜ್ಯದಲ್ಲಿ ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದೆ ಎಂದಿದ್ದಾರೆ.