ನನ್ನ ಕ್ಷೇತ್ರದಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿ ಜೊತೆ ಹೊಂದಾಣಿಕೆ ಇಲ್ಲ: ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್

Prasthutha|

ರಾಯಚೂರು: ನನ್ನ ಕ್ಷೇತ್ರದಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿಯೊಂದಿಗೆ ಹೊಂದಾಣಿಕೆ ಆಗಲ್ಲ ಎಂದು ರಾಯಚೂರಿನ ದೇವದುರ್ಗ ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

- Advertisement -

ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ದೇವದುರ್ಗದಲ್ಲಿ ಬಿಜೆಪಿ ಕಾರ್ಯಕರ್ತರು ಸತತವಾಗಿ ನನಗೆ ಕಾಟ ನೀಡಿದ್ದಾರೆ. ನನ್ನ ಮೇಲೆ ಮತ್ತು ನನ್ನ ಮಗಳ ಮೇಲೆ ಅಟ್ಯಾಕ್ ಮಾಡಿದ್ರು. ಜೆಡಿಎಸ್ ಕಾರ್ಯಕರ್ತರಿಗೆ ಚಪ್ಪಲಿಯಿಂದ ಹೊಡೆಯುವುದಾಗಿ ಹೇಳಿದ್ರು ಎಂದು ಆರೋಪಿಸಿದರು.

Join Whatsapp