Home ಟಾಪ್ ಸುದ್ದಿಗಳು ದೆಹಲಿಯಲ್ಲಿ ಬೇರೆ ಪಕ್ಷಗಳೊಂದಿಗೆ ಮೈತ್ರಿ ಇಲ್ಲ, ಸ್ವತಂತ್ರವಾಗಿ ಸ್ಪರ್ಧೆ: ಮಾಯಾವತಿ

ದೆಹಲಿಯಲ್ಲಿ ಬೇರೆ ಪಕ್ಷಗಳೊಂದಿಗೆ ಮೈತ್ರಿ ಇಲ್ಲ, ಸ್ವತಂತ್ರವಾಗಿ ಸ್ಪರ್ಧೆ: ಮಾಯಾವತಿ

ಲಖನೌ: ದೆಹಲಿ ವಿಧಾನಸಭೆ ಚುನಾವಣೆಗೆ ಬೇರೆ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ , ಪಕ್ಷ ಸ್ವತಂತ್ರವಾಗಿ ಸ್ವಂತ ಬಲದಿಂದ ಸ್ಪರ್ಧಿಸಲಿದೆ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಅವರು, ‘ಬಿಎಸ್‌ ಪಿ ಬಡವರು ಮತ್ತು ತುಳಿತಕ್ಕೊಳಗಾದವರ ಪಕ್ಷವಾಗಿದ್ದು, ಇದು ಹಣಬಲದಿಂದ ದೂರವಿರುತ್ತದೆ. ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಸರ್ಕಾರಿ ಯಂತ್ರಗಳ ದುರುಪಯೋಗ, ಕೋಮುವಾದ ಮತ್ತು ಇತರ ಕೆಟ್ಟ ಪ್ರಚಾರಗಳಿಂದ ಕಳಂಕಿತವಾಗದಂತೆ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯುವಂತೆ ಚುನಾವಣಾ ಆಯೋಗವು ನೋಡಿಕೊಳ್ಳುತ್ತದೆ’ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

‘ಚುನಾವಣೆಗಳು ಪ್ರಜಾಪ್ರಭುತ್ವದ ಬೆನ್ನೆಲುಬು. ಪಕ್ಷವು ಚುನಾವಣೆಯಲ್ಲಿ ಸಂಪೂರ್ಣ ಸಿದ್ಧತೆ ಮತ್ತು ಬಲದೊಂದಿಗೆ ತನ್ನ ಸ್ವಂತ ಶಕ್ತಿಯಿಂದ ಹೋರಾಡಲಿದೆ. ಈ ಚುನಾವಣೆಯಲ್ಲಿ ಪಕ್ಷವು ಖಂಡಿತವಾಗಿಯೂ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆಯಿದೆ’ ಎಂದು ಹೇಳಿದ್ದಾರೆ.

‘ಯಾವುದೇ ಪಕ್ಷದ ಹುಸಿ ಭರವಸೆಗಳಿಗೆ ಒಳಗಾಗಬಾರದು. ತಮ್ಮ ಮತಗಳನ್ನು ಬುದ್ದಿವಂತಿಕೆಯಿಂದ ಬಳಸಬೇಕು. ಸಾರ್ವಜನಿಕ ಹಿತಾಸಕ್ತಿ ಮತ್ತು ಕಲ್ಯಾಣಕ್ಕಾಗಿ ಮೀಸಲಾಗಿರುವ ಬಿಎಸ್‌ಪಿಯ ಅಭ್ಯರ್ಥಿಗಳಿಗೆ ನಿಮ್ಮ ಮತ ಚಲಾಯಿಸಬೇಕು’ ಎಂದು ಮತದಾರರಿಗೆ ಮನವಿ ಮಾಡಿದ್ದಾರೆ.

Join Whatsapp
Exit mobile version