ಕೆಫೆ ಸ್ಫೋಟ ಪ್ರಕರಣ | ಇದುವರೆಗೆ ಯಾರನ್ನೂ ಬಂಧಿಸಿಲ್ಲ: ಪೊಲೀಸ್ ಆಯುಕ್ತ ಸ್ಪಷ್ಟನೆ

Prasthutha|

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಯಾರನ್ನೂ ಬಂಧಿಸಿಲ್ಲ ಎಂದು ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಸ್ಪಷ್ಟನೆ ನೀಡಿದ್ದಾರೆ.

- Advertisement -


ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ರಾಮೇಶ್ವರಂ ಕೆಫೆ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ತನಿಖೆ ಕ್ಷಿಪ್ರ ಗತಿಯಲ್ಲಿ ನಡೆಯುತ್ತಿದೆ. ಘಟನಾ ಸ್ಥಳದಲ್ಲಿ ದೊರೆತ ಕುರುಹುಗಳ ಆಧಾರದ ಮೇಲೆ ಅನೇಕ ಪೊಲೀಸ್ ತಂಡಗಳು ಬೇರೆ ಬೇರೆ ಆಯಾಮಗಳಿಂದ ತನಿಖೆ ಕೈಗೊಳ್ಳುತ್ತಿವೆ ಎಂದು ಮಾಹಿತಿ ನೀಡಿದ್ದಾರೆ. ಪ್ರಕರಣದ ತನಿಖೆಯನ್ನು ಕೇಂದ್ರ ಅಪರಾಧ ದಳಕ್ಕೆ (ಸಿಸಿಬಿ) ವಹಿಸಲಾಗಿದೆ. ಘಟನೆಯಲ್ಲಿನ ಗಾಯಾಳುಗಳು ಗುಣಮುಖರಾಗುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಯಾರನ್ನೂ ಬಂಧಿಸಿರುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.



Join Whatsapp