ನವದೆಹಲಿ: ಅಮೆರಿಕದ ಉತ್ಪನ್ನಗಳ ಮೇಲಿನ ಆಮದು ಸುಂಕವನ್ನು ಕಡಿತಗೊಳಿಸುವ ಬಗ್ಗೆ ಯಾವುದೇ ಭರವಸೆ ನೀಡಿಲ್ಲ ಎಂದು ಭಾರತ ಸ್ಪಷ್ಟನೆ ನೀಡಿದೆ.
ಅಮೆರಿಕದ ಉತ್ಪನ್ನಗಳ ಮೇಲಿನ ಆಮದು ಸುಂಕಗಳನ್ನು ಗಣನೀಯವಾಗಿ ಕಡಿತಗೊಳಿಸಲು ಭಾರತ ಒಪ್ಪಿಕೊಂಡಿದೆ ಎಂಬ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಭಾರತ ಸ್ಪಷ್ಟನೆ ನೀಡಿದೆ.
ಭಾರತ ಸರ್ಕಾರ ಆಮದು ಸುಂಕಗಳನ್ನು ಕಡಿತಗೊಳಿಸಲು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ, ಈ ವಿಚಾರದಲ್ಲಿ ಭಾರತ – ಅಮೆರಿಕ ನಡುವೆ ಮಾತುಕತೆ ನಡೆಯುತ್ತಿದೆ ಎಂದು ಸ್ಪಷ್ಟನೆ ಎಂದು ಹೇಳಿದೆ.
