ಮುಂಬೈ: ಅನಿಲ್ ದೇಶ್ ಮುಖ್ ಪರ ವಕೀಲ ಆನಂದ್ ದಾಗಾ ಮತ್ತು ಸಬ್ ಇನ್ಸ್ ಪೆಕ್ಟರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸೆಪ್ಟೆಂಬರ್ 8 ರಂದು ಕೇಂದ್ರ ತನಿಖಾ ಸಂಸ್ಥೆ (ಸಿಬಿಐ) ವಿಶೇಷ ನ್ಯಾಯಾಲಯವು ತಿರಸ್ಕರಿಸಿದೆ. ಇವರ ವಿರುದ್ಧ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಯ ಸೋರಿಕೆಯ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಬಂಧಿಸಿ 14 ದಿನಗಳ ನ್ಯಾಯಾಂಗ ಒಪ್ಪಿಸಲಾಗಿತ್ತು.
ಸಿಬಿಐ ವಿಶೇಷ ನ್ಯಾಯಾಲಯ ನ್ಯಾಯಾಧೀಶ ವಿಮಲ್ ಕುಮಾರ್ ಯಾದವ್ ಅವರು ಇಬ್ಬರ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ. ಅಲ್ಲದೆ ಇಬ್ಬರ ನ್ಯಾಯಾಂಗ ಬಂಧನದ ಅವಧಿ ಮುಗಿದ ನಂತರ ಸೆಪ್ಟೆಂಬರ್ 20 ರಂದು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸೂಚಿಸಿದ್ದಾರೆ.