Home ಟಾಪ್ ಸುದ್ದಿಗಳು ಕಡಿಮೆ ದರದ ಚೀನಿ ಫೋನ್‌ಗಳ ನಿಷೇಧವಿಲ್ಲ: ಕೇಂದ್ರ ಸ್ಪಷ್ಟನೆ

ಕಡಿಮೆ ದರದ ಚೀನಿ ಫೋನ್‌ಗಳ ನಿಷೇಧವಿಲ್ಲ: ಕೇಂದ್ರ ಸ್ಪಷ್ಟನೆ

ನವದೆಹಲಿ: ಕಡಿಮೆ ದರದ ಚೀನಾ ಸ್ಮಾರ್ಟ್‌ಫೋನ್‌ಗಳನ್ನು ನಿಷೇಧ ಮಾಡುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. 12 ಸಾವಿರ ರೂ. ಒಳಗಿನ ಕಡಿಮೆ ಬಜೆಟ್ ಸ್ಮಾರ್ಟ್‌ಫೋನ್‌ಗಳನ್ನು ನಿಷೇಧಿಸುವ ಯಾವುದೇ ಯೋಜನೆಯನ್ನು ಭಾರತ ಸರ್ಕಾರ ಹೊಂದಿಲ್ಲ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಖಾತೆಯ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.

ಭಾರತದಿಂದ ರಫ್ತುಗಳನ್ನು ಹೆಚ್ಚಿಸಲು ಚೀನಾದ ಸ್ಮಾರ್ಟ್‌ಫೋನ್ ಕಂಪನಿಗಳಿಗೆ ಸರ್ಕಾರ ಮನವಿ ಮಾಡಿದೆ. ಮುಂಬರುವ ನಾಲ್ಕು ವರ್ಷಗಳಲ್ಲಿ 300 ಬಿಲಿಯನ್ ಡಾಲರ್‌ ಎಲೆಕ್ಟ್ರಾನಿಕ್ ಉತ್ಪಾದನೆಯನ್ನು ತಲುಪಲು ಸರ್ಕಾರ ಎದುರು ನೋಡುತ್ತಿದೆ. ಪ್ರಸ್ತುತ ಉತ್ಪಾದನೆಯು ಸುಮಾರು 76 ಶತಕೋಟಿ ಡಾಲರ್‌ ಎಂದು ಅಂದಾಜಿಸಲಾಗಿದೆ.

ದೇಶಿ ಮೊಬೈಲ್‌ ಉದ್ಯಮಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 12 ಸಾವಿರ ರೂ.ಗಿಂತ ಕಡಿಮೆ ಮೌಲ್ಯದ ವಿದೇಶಿ ಫೋನ್‌ಗಳ ಮಾರಾಟದ ಮೇಲೆ ನಿರ್ಬಂಧ ಹೇರಲು ಈ ಹಿಂದೆ ಚಿಂತನೆ ನಡೆಸಿತ್ತು .

Join Whatsapp
Exit mobile version