ಶಿವರಾಜ್ ಕುಮಾರ್ ಸಿನಿಮಾ ಮೇಲಿಲ್ಲ ನಿರ್ಬಂಧ: ಚುನಾವಣಾ ಆಯೋಗ ಸ್ಪಷ್ಟನೆ

Prasthutha|

ಬೆಂಗಳೂರು: ಗೀತಾ ಶಿವರಾಜ್ ಕುಮಾರ್ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಪಡೆದು ಸ್ಪರ್ಧೆಗೆ ಇಳಿದಿದ್ದಾರೆ. ಶಿವರಾಜ್ ಕುಮಾರ್ ಅವರು ಪತ್ನಿ ಪರವಾಗಿ ನಿರಂತರವಾಗಿ ಪ್ರಚಾರ ಮಾಡುತ್ತಿದ್ದಾರೆ. ಅವರು ಪ್ರಭಾವಿ ವ್ಯಕ್ತಿ ಆಗಿರುವುದರಿಂದ ಅವರು ನಟಿಸಿದ ಸಿನಿಮಾ, ಜಾಹೀರಾತುಗಳ ಮೇಲೆ ಬ್ಯಾನ್ ಹೇರುವಂತೆ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಕೆ ಆಗಿತ್ತು. ಸಿನಿಮಾಗಳ ಮೇಲೆ ಬ್ಯಾನ್ ಹೇರಲು ಸಾಧ್ಯವಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ.

- Advertisement -

ಚುನಾವಣೆಗೆ ಸ್ಪರ್ಧಿಸುವ ಅಥವಾ ಪ್ರಚಾರ ಮಾಡುವ ನಟರನ್ನು ಒಳಗೊಂಡ ಸಿನಿಮಾಗಳ ಪ್ರದರ್ಶನವನ್ನು ಸರ್ಕಾರದ ಹಣದಿಂದ ನಡೆಸಲ್ಪಡುವ ದೂರದರ್ಶನದಲ್ಲಿ ಮಾತ್ರ ನಾವು ನಿಷೇಧಿಸಬಹುದು. ಖಾಸಗಿ ಟಿವಿ ಚಾನೆಲ್ ಗಳು ಮತ್ತು ಸಿನಿಮಾ ಥಿಯೇಟರ್ ಗಳಲ್ಲಿ ವಾಣಿಜ್ಯ ಪ್ರದರ್ಶನಗಳನ್ನು ನಿಲ್ಲಿಸಲು ಸಾಧ್ಯವಿಲ್ಲ’ ಎಂದು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಹೇಳಿದ್ದಾರೆ.



Join Whatsapp