ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಿಲ್ಲ: ಕೆಎಸ್​ ಈಶ್ವರಪ್ಪ

Prasthutha|

ಬೆಂಗಳೂರು: ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ನಡುವೆ ಮೈತ್ರಿಯಿಲ್ಲ ಎಂದು ಹೇಳಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಪಕ್ಷದ ಗೆಲುವಿಗೆ ಶ್ರಮಿಸುವಂತೆ ಮುಖಂಡರಿಗೆ ಹಾಗೂ ಕಾರ್ಯಕರ್ತರಿಗೆ ಕರೆ ನೀಡಿದರು.

- Advertisement -

ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆ ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಈಶ್ವರಪ್ಪ ಅವರು ಆಕಾಂಕ್ಷಿಗಳ ಜೊತೆ ಸಭೆ ನಡೆಸಿದರು. ಬಳಿಕ ಮಾತನಾಡಿದ ಈಶ್ವರಪ್ಪ, ಲೋಕಸಭಾ ಚುನಾವಣೆಯಲ್ಲಿ ಮಾತ್ರ ಮೈತ್ರಿ ಮಾಡಿಕೊಳ್ಳಲಾಗುತ್ತದೆ. ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್‌ಗೆ ಬಿಜೆಪಿ ಬೆಂಬಲ ನೀಡುವುದಿಲ್ಲ. ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಒಮ್ಮೆಯೂ ಗೆದ್ದಿಲ್ಲ. ಈ ಬಾರಿ ಕ್ಷೇತ್ರದಲ್ಲಿ ಬಿಜೆಪಿಯಲ್ಲಿ 12 ಟಿಕೆಟ್ ಆಕಾಂಕ್ಷಿಗಳಿದ್ದಾರೆ ಎಂದರು

Join Whatsapp