Home ಟಾಪ್ ಸುದ್ದಿಗಳು ರಾಜ್ಯದಲ್ಲಿ ಯಾವುದೇ BPL ಕಾರ್ಡ್ ರದ್ದು ಮಾಡುವುದಿಲ್ಲ: ಸಚಿವ ಕೆ. ಹೆಚ್ ಮುನಿಯಪ್ಪ

ರಾಜ್ಯದಲ್ಲಿ ಯಾವುದೇ BPL ಕಾರ್ಡ್ ರದ್ದು ಮಾಡುವುದಿಲ್ಲ: ಸಚಿವ ಕೆ. ಹೆಚ್ ಮುನಿಯಪ್ಪ

ಬೆಂಗಳೂರು: ರಾಜ್ಯದಲ್ಲಿ ಯಾವುದೇ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲಿ 3 ಲಕ್ಷ ಜನರು ಅರ್ಜಿ ಹಾಕಿದ್ದರು. ಅರ್ಜಿ ಬಗ್ಗೆ ಪರಿಶೀಲನೆ ಮಾಡಿ ಅನುಮೋದನೆ ಮಾಡಲು ಸೂಚನೆ ನೀಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ. ಹೆಚ್ ಮುನಿಯಪ್ಪ ಹೇಳಿದ್ದಾರೆ.

ನಾಲ್ಕು ಚಕ್ರ ವಾಹನ ಇದ್ದರೆ ಬಿಪಿಎಲ್ ಕಾರ್ಡ್ ರದ್ದು ವಿಚಾರವಾಗಿ ಮಾತನಾಡಿದ ಅವರು ಈ ನಿಯಮ ಬಿಜೆಪಿ ಸರ್ಕಾರದ ಅವದಿಯದ್ದು ಸದ್ಯಕ್ಕೆ ಈ ವಿಚಾರದಲ್ಲಿ ಯಾವುದೆ ತೀರ್ಮಾನವಿಲ್ಲ. 1.28 ಕೋಟಿ ಜನರು ಪಡಿತರ ಚೀಟಿ ಹೊಂದಿದ್ದಾರೆ. ಎಲ್ಲವನ್ನು ಪರಿಶೀಲನೆ ಮಾಡಿ ಎಲ್ಲರಿಗೂ ಅಕ್ಕಿ ವಿತರಣೆ ಮಾಡುವ ಬಗ್ಗೆ ಕ್ರಮವಹಿಸುತ್ತೇವೆ. ಯಾರು ಅರ್ಹರಿರುತ್ತಾರೆ ಅವರಿಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಸಚಿವರು ಭರವಸೆ ನೀಡಿದರು.

ಇನ್ನು ಮೂರು ತಿಂಗಳಲ್ಲಿ ಅರ್ಹರಿಗೆ ಬಿಪಿಎಲ್, ಎಪಿಎಲ್ ಕಾರ್ಡ್ ನೀಡಲಾಗುತ್ತೆ. ಬ್ಯಾಂಕ್ ಖಾತೆ ಇಲ್ಲದಿದ್ದಕ್ಕೆ ಕೆಲವರ ಕಾರ್ಡ್ ರದ್ದಾಗಿತ್ತು. ಈ ಬಗ್ಗೆಯೂ ಕೂಡ ಕ್ರಮ ವಹಿಸಲು ಸೂಚನೆ ನೀಡಲಾಗಿದೆ ಎಂದರು.

Join Whatsapp
Exit mobile version