Home ಟಾಪ್ ಸುದ್ದಿಗಳು ಹೆದ್ದಾರಿ, ರಸ್ತೆಗಳ ಬದಿ ಕಟ್ಟಡ ನಿರ್ಮಿಸುವಂತಿಲ್ಲ: ಸರ್ಕಾರ ಆದೇಶ

ಹೆದ್ದಾರಿ, ರಸ್ತೆಗಳ ಬದಿ ಕಟ್ಟಡ ನಿರ್ಮಿಸುವಂತಿಲ್ಲ: ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಹೆದ್ದಾರಿ, ಜಿಲ್ಲಾ ರಸ್ತೆಗಳ ಬಿದಿಗಳಲ್ಲಿ ಕಟ್ಟಡ ನಿರ್ಮಿಸುವಂತಿಲ್ಲ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ರಾಜ್ಯ ಹೆದ್ದಾರಿಗಳ ಮಧ್ಯಭಾಗದಿಂದ 40 ಮೀಟರ್, ಜಿಲ್ಲಾ ರಸ್ತೆಗಳ ಮಧ್ಯಭಾಗದಿಂದ 25 ಮೀಟರ್ ಅಂತರದಲ್ಲಿ ಯಾವುದೇ ಕಟ್ಟಡಗಳನ್ನು ನಿರ್ಮಿಸುವಂತಿಲ್ಲ ಎಂದು ಪ್ರಕಟನೆಯಲ್ಲಿ ಉಲ್ಲೇಖಿಸಲಾಗಿದೆ.

ಈ ಹೇಳಿಕೆಯು ಹಲವು ಗೊಂದಲಗಳಿಗೆ ತೆರೆ ಎಳೆದಿದ್ದು, ರಸ್ತೆಗಳಿಂದ ಎಷ್ಟು ಅಂತರದಲ್ಲಿ ಕಟ್ಟಡ ನಿರ್ಮಿಸಿದರೆ ಅದು ಅಧಿಕೃತ ನಿರ್ಮಾಣ ಎನ್ನಿಸಿಕೊಳ್ಳುತ್ತದೆ ಎಂಬುವುದರ ಬಗ್ಗೆ ಸ್ಪಷ್ಟನೆ ನೀಡಿದೆ.

Join Whatsapp
Exit mobile version