ನವದೆಹಲಿ : ಹಿರಿಯ ಪತ್ರಕರ್ತ ರಾಜ್ ದೀಪ್ ಸರ್ದೇಸಾಯಿ ವಿರುದ್ಧ ಸ್ವಯಂ ಪ್ರೇರಿತ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಾಗದಂತೆ ತನ್ನ ವೆಬ್ ಸೈಟ್ ನಲ್ಲಿ ಪ್ರಮಾದವಶಾತ್ ಪ್ರದರ್ಶಿಸಿದೆ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟನೆ ನೀಡಿದೆ.
ಸುಪ್ರೀಂ ಕೋರ್ಟ್ ರಾಜ್ ದೀಪ್ ಸರ್ದೇಸಾಯಿ ವಿರುದ್ಧ ಸ್ವಯಂ ಪ್ರೇರಿತವಾಗಿ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕ್ರಿಯೆಯನ್ನು ಆರಂಭಿಸಿರುವ ಬಗ್ಗೆ ಕೆಲವು ಸುದ್ದಿ ವಾಹಿನಿಗಳು ಸುದ್ದಿ ಮಾಡಿದ್ದ ಹಿನ್ನೆಲೆಯಲ್ಲಿ ಕೋರ್ಟ್ ಈ ಸ್ಪಷ್ಟನೆ ನೀಡಿದೆ.
ಸುಪ್ರೀಂ ಕೋರ್ಟ್ ವೆಬ್ ಸೈಟ್ ನಲ್ಲಿ ರಾಜ್ ದೀಪ್ ಸರ್ದೇಸಾಯಿ ವಿರುದ್ಧ ಪ್ರಕರಣ ದಾಖಲಿಸಿರುವ ಬಗ್ಗೆ ತಪ್ಪಾಗಿ ತೋರಿಸಿದೆ. ಪ್ರಮಾದವನ್ನು ಗುರುತಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸುಪ್ರೀಂ ಕೋರ್ಟ್ ನ ಉಪ ರಿಜಿಸ್ಟ್ರಾರ್ (ಸಾರ್ವಜನಿಕ ವ್ಯವಹಾರ) ರಾಕೇಶ್ ಶರ್ಮಾ ತಿಳಿಸಿದ್ದಾರೆ.