SSLC ಪರೀಕ್ಷೆಯಲ್ಲಿ ಹಿಜಾಬ್ ಗೆ ಇಲ್ಲ ಅವಕಾಶ: ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ

Prasthutha|

ಬೆಂಗಳೂರು: ಹಿಜಾಬ್ ಧರಿಸಿ ಎಸ್ ಎಸ್ ಎಲ್ ಸಿ ಪರೀಕ್ಷೆ  ಬರೆಯಲು ಅವಕಾಶ ಇಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ನೀಡಿದೆ.

- Advertisement -

ಮಾರ್ಚ್.28ರ ಸೋಮವಾರದಿಂದ SSLC ಪರೀಕ್ಷೆ ಆರಂಭವಾಗುತ್ತಿದ್ದು, ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿ.ಶ್ರೀನಿವಾಸ್ ಮೂರ್ತಿ ಸುತ್ತೋಲೆ ಹೊರಡಿಸಿದ್ದಾರೆ.

1995ರ ನಿಯಮ 11ರಲ್ಲಿ ಪ್ರದತ್ತವಾಗಿರುವ ಅಧಿಕಾರದನ್ವಯ ಸಮವಸ್ತ್ರ ಜಾರಿ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗಪಡಿಸಿರುವ ಶಾಲಾ ಸಮವಸ್ತ್ರ ಕಡ್ಡಾಯವಾಗಿರಲಿದೆ. ಖಾಸಗಿ ಶಾಲೆಗಳಲ್ಲಿ ಆಯಾ ಆಡಳಿತ ಮಂಡಳಿಗಳು ನಿರ್ಧರಿಸಿರುವ ಸಮವಸ್ತ್ರ ಕಡ್ಡಾಯ ಮಾಡಲಾಗುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ನೀಡಿದೆ.



Join Whatsapp