Home ಟಾಪ್ ಸುದ್ದಿಗಳು ಕೋವಿಡ್ ಪರಿಹಾರದಲ್ಲಿ ಯಾವುದೇ ಬದಲಾವಣೆ ಇಲ್ಲ: ಆರ್. ಅಶೋಕ ಸ್ಪಷ್ಟನೆ

ಕೋವಿಡ್ ಪರಿಹಾರದಲ್ಲಿ ಯಾವುದೇ ಬದಲಾವಣೆ ಇಲ್ಲ: ಆರ್. ಅಶೋಕ ಸ್ಪಷ್ಟನೆ

ಬೆಂಗಳೂರು: ಕೋವಿಡ್ ನಿಂದ ಮೃತಪಟ್ಟ ಬಿಪಿಎಲ್ ಕುಟುಂಬಗಳಿಗೆ 1 ಲಕ್ಷ ರೂ. ಪರಿಹಾರ ನೀಡುವ ತೀರ್ಮಾನದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.


ರಾಜ್ಯದಲ್ಲಿ ಕೋವಿಡ್ ನಿಂದ ಮೃತಪಟ್ಟ ಬಿಪಿಎಲ್ ಕುಟುಂಬಗಳ ವಾರಸುದಾರರಿಗೆ 1 ಲಕ್ಷ ರೂ. ಪರಿಹಾರವನ್ನು ರಾಜ್ಯ ಸರ್ಕಾರ ನೀಡುತ್ತದೆ ಎಂದವರು ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡುತ್ತ ಸ್ಪಷ್ಟಪಡಿಸಿದರು.
ಕೇಂದ್ರ ಸರ್ಕಾರ ಕೋವಿಡ್ ನಿಂದ ಮೃತಪಟ್ಟ ಎಲ್ಲರಿಗೂ 50 ಸಾವಿರ ರೂ. ಪರಿಹಾರ ಪ್ರಕಟಿಸಿದೆ. ಅದರಂತೆ ರಾಜ್ಯದ ಪರಿಹಾರ ಸೇರಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಒಟ್ಟು 1.5 ಲಕ್ಷ ಪರಿಹಾರ ಸಿಗಲಿದೆ. ಬಿಪಿಎಲ್ ಕಾರ್ಡ್ ಇಲ್ಲದವರಿಗೆ 50 ಸಾವಿರ ರೂ. ಪರಿಹಾರ ಸಿಗಲಿದೆ. ರಾಜ್ಯದ ಎಲ್ಲ ತಾಲ್ಲೂಕು ಕಚೇರಿ, ನಾಡ ಕಚೇರಿ ಬಿಬಿಎಂಪಿ ವ್ಯಾಪ್ತಿಯ ವಾರ್ಡ್ ಕಚೇರಿಗಳಲ್ಲಿ ಕೋವಿಡ್ ಪರಿಹಾರಕ್ಕೆ ಅರ್ಜಿ ಸಲ್ಲಿಸಬಹುದು ಎಂದರು.


ಕೋವಿಡ್ ನಿಂದ ವ್ಯಕ್ತಿ ಎಲ್ಲೇ ಮೃತಪಟ್ಟರೂ ತಮ್ಮ ವಾಸಸ್ಥಳದ ವ್ಯಾಪ್ತಿಯಲ್ಲೇ ಅರ್ಜಿ ಸಲ್ಲಿಸಬೇಕು. ಅಧಿಕೃತ ಮರಣ ಪ್ರಮಾಣಪತ್ರ ನೀಡಬೇಕು. ಕೋವಿಡ್ನಿಂ ದ ಮೃತಪಟ್ಟ ವ್ಯಕ್ತಿ ಬಿಪಿಎಲ್ ಕುಟುಂಬದ ದುಡಿಯುವ ಸದಸ್ಯನಾಗಿರಬೇಕು ಹಾಗೂ 18 ವರ್ಷ ತುಂಬಿರಬೇಕು ಎಂಬ ನಿಯಮಗಳಿದ್ದು, ಈಗಾಗಲೇ ಪರಿಹಾರ ಪಡೆಯುವ ಸಂಬಂಧ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ ಎಂದರು.

Join Whatsapp
Exit mobile version